ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಮ ಮಂದಿರವು ಭಾರತೀಯರ ಭಾಗ್ಯ: ನಳಿನ್

ಕಟೀಲು ದೇವಸ್ಥಾನದಲ್ಲಿ ವಿಶೇಷ ಪೂಜೆಯಲ್ಲಿ ಪಾಲ್ಗೊಂಡ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ
Last Updated 5 ಆಗಸ್ಟ್ 2020, 13:07 IST
ಅಕ್ಷರ ಗಾತ್ರ

ಮೂಲ್ಕಿ: ಅಯೋಧ್ಯೆಯಲ್ಲಿ ರಾಮ ಮಂದಿರದ ನಿರ್ಮಾಣವು ಭಾರತೀಯರ ಭಾಗ್ಯ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್‌ ಕುಮಾರ್ ಕಟೀಲ್‌ ಹೇಳಿದರು.

ಅಯೋಧ್ಯೆಯಲ್ಲಿ ರಾಮ ಮಂದಿರಕ್ಕೆ ಭೂಮಿಪೂಜೆಯ ಅಂಗವಾಗಿಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಬುಧವಾರ ನಡೆದ ವಿಶೇಷ ಪೂಜೆಯ ಬಳಿಕ ಅವರು ಮಾತನಾಡಿದರು.

ಭಜನಾ ಮಂಡಳಿಯಿಂದ ಭಜನೆ, ಶ್ರೀ ದುರ್ಗಾ ಮಕ್ಕಳ ಮೇಳದ ಕಲಾವಿದರಿಂದ ರಾಮ, ಲಕ್ಷ್ಮಣ, ಸೀತೆ, ಹನುಮಂತ ವೇಷಗಳೊಂದಿಗೆ ಯಕ್ಷ ನಾಟ್ಯವನ್ನು ದೇಗುಲದಲ್ಲಿ ಹಮ್ಮಿಕೊಳ್ಳಲಾಗಿತ್ತು. ಚೆಂಡೆ, ಕೊಂಬು ಜಾಗಟೆಗಳ ಅಬ್ಬರದೊಂದಿಗೆ ದೀಪವನ್ನು ಬೆಳಗಿಸಲಾಯಿತು. ಹದಿನೆಂಟು ಕರಸೇವಕರನ್ನು ಗೌರವಿಸಲಾಯಿತು. ಭಕ್ತರಿಗೆ ಸಿಹಿ ಹಂಚಲಾಯಿತು. ಸಂಸದರು ಕೇಸರಿ ಬಲೂನುಗಳನ್ನು ಆಗಸಕ್ಕೆ ಹಾರಿ ಬಿಟ್ಟರು. ಕುದ್ರುವಿನಲ್ಲಿ ಚಂದನ ಹಾಗೂ ಬಿಲ್ವಪತ್ರೆ ಗಿಡಗಳನ್ನು ನೆಡಲಾಯಿತು.

ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಸುದರ್ಶನ್, ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷೆ ಕಸ್ತೂರಿ ಪಂಜ, ಬಿಜೆಪಿ ಮುಖಂಡ ಸುನೀಲ್ ಆಳ್ವ, ದೇಗುಲದ ವೇದವ್ಯಾಸ ತಂತ್ರಿ, ಅರ್ಚಕರಾದ ಲಕ್ಷ್ಮೀನಾರಾಯಣ ಆಸ್ರಣ್ಣ, ವಾಸುದೇವ ಆಸ್ರಣ್ಣ, ವೆಂಕಟರಮಣ ಆಸ್ರಣ್ಣ, ಅನಂತ ಆಸ್ರಣ್ಣ, ಪ್ರಸಾದ ಆಸ್ರಣ್ಣ, ಶ್ರೀಹರಿ ಆಸ್ರಣ್ಣ, ಪ್ರಮುಖರಾದ ಈಶ್ವರ ಕಟೀಲ್, ಭುವನಾಭಿರಾಮ ಉಡುಪ, ಅತ್ತೂರುಬೈಲು ರಾಘವೇಂದ್ರ ಉಡುಪ, ಅತ್ತೂರು ಪ್ರಸನ್ನ ಶೆಟ್ಟಿ, ಲೋಕಯ್ಯ ಸಾಲ್ಯಾನ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT