ಬುಧವಾರ, ಜನವರಿ 27, 2021
18 °C

ರಾಮಕೃಷ್ಣ ಮಠ: ಸ್ವಾಮಿ ಹರ್ಷಾನಂದಜಿ ನಿಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ನಗರದ ರಾಮಕೃಷ್ಣ ಮಠದ ಅಧ್ಯಕ್ಷರಾಗಿದ್ದ ಸ್ವಾಮಿ ಹರ್ಷಾನಂದ ಮಹಾರಾಜ್ ಅವರು ಹೃದಯಾಘಾತದಿಂದ ಮಂಗಳವಾರ ನಿಧನರಾದರು. 

ಬುಧವಾರ ಮಧ್ಯಾಹ್ನ 3 ಗಂಟೆಗೆ ಅವರ ಅಂತ್ಯಕ್ರಿಯೆ ನಡೆಯಲಿದೆ. ಮಠದಲ್ಲಿ ಅವರ ಪಾರ್ಥಿವ ಶರೀರದ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. 

ಸ್ವಾಮಿ ಹರ್ಷಾನಂದ ಮಹಾರಾಜ್ ಅವರು ರಾಮಕೃಷ್ಣ ಮಠದ ಅತ್ಯಂತ ಹಿರಿಯ ಸನ್ಯಾಸಿಯಾಗಿದ್ದರು. 1989ರಿಂದ ಬೆಂಗಳೂರು ರಾಮಕೃಷ್ಣ ಮಠದ ಅಧ್ಯಕ್ಷರಾಗಿದ್ದರು. ರಾಮಕೃಷ್ಣ ಮಠದ ಆರನೇ ಅಧ್ಯಕ್ಷರಾದ ಸ್ವಾಮಿ ವಿರಾಜನಂದರಿಂದ ಮಂತ್ರದೀಕ್ಷೆಯನ್ನು ಪಡೆದಿದ್ದರು. 1962ರಲ್ಲಿ ಮಠದ 8ನೇ ಅಧ್ಯಕ್ಷರಾಗಿದ್ದ ಸ್ವಾಮಿ ವಿಶುದ್ಧಾನಂದರಲ್ಲಿ ಸನ್ಯಾಸಿ ದೀಕ್ಷೆಯನ್ನು ಸ್ವೀಕರಿಸಿದ್ದರು. ಮಂಗಳೂರು, ಮೈಸೂರು, ಬೇಲೂರು ಮಠ ಮತ್ತು ಅಲ್ಲಹಾಬಾದ್ ರಾಮಕೃಷ್ಣ ಮಠಗಳಲ್ಲೂ ಇವರು ಕಾರ್ಯ ನಿರ್ವಹಿಸಿದ್ದರು.

ಕನ್ನಡ, ಇಂಗ್ಲೀಷ್ ಮತ್ತು ಸಂಸ್ಕೃತದಲ್ಲಿ ಹಲವು ಪುಸ್ತಕಗಳನ್ನು ಅವರು ಬರೆದಿದ್ದಾರೆ. ಅವರ ಕೆಲವು ಕೃತಿಗಳು ಫ್ರೆಂಚ್,‌ಕೊರಿಯನ್ ಮತ್ತು ಇಂಡೋನೇಷಿಯನ್ ಭಾಷೆಗಳಿಗೂ ಅನುವಾದಗೊಂಡಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು