ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಿದ್ದರಾಮಯ್ಯಗೆ ‘ರಾಮಮನೋಹರ ಲೋಹಿಯಾ ಪ್ರಶಸ್ತಿ’

Last Updated 17 ಮಾರ್ಚ್ 2022, 16:24 IST
ಅಕ್ಷರ ಗಾತ್ರ

ಬೆಂಗಳೂರು: ಭಾರತ ಯಾತ್ರಾ ಕೇಂದ್ರ ನೀಡುವ ‘ಡಾ. ರಾಮಮನೋಹರ ಲೋಹಿಯಾ ಪ್ರಶಸ್ತಿ’ಗೆವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಆಯ್ಕೆಯಾಗಿದ್ದಾರೆ.

ಈ ಪ್ರಶಸ್ತಿ ₹ 25 ಸಾವಿರ ನಗದು ಹಾಗೂ ಫಲಕ ಒಳಗೊಂಡಿದೆ. ಬಿ.ಎಲ್. ಶಂಕರ್, ಟಿ.ಎನ್. ಸೀತಾರಾಮ್ ಮತ್ತು ಬಿ.ಆರ್. ಪಾಟೀಲ ಅವರಿದ್ದ ಸಮಿತಿ ಈ ಆಯ್ಕೆ ಮಾಡಿದೆ. ಕೇಂದ್ರವು ಇದೇ 23ರ ಸಂಜೆ 5.30ಕ್ಕೆ ಕರ್ನಾಟಕ ಚಿತ್ರಕಲಾ ಪರಿಷತ್ತಿನಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ಹಮ್ಮಿಕೊಂಡಿದೆ.

ನವದೆಹಲಿಯಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (ಜೆಎನ್‌ಯು) ಪ್ರಾಧ್ಯಾಪಕ ಪ್ರೊ. ಆನಂದಕುಮಾರ್, ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಲೇಖಕಿ ಡಾ. ವಸುಂಧರಾ ಭೂಪತಿ ಹಾಗೂ ಡಾ. ನಾಡಗೌಡ ಅವರು ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ಕೇಂದ್ರದ ಪ್ರಧಾನ ಕಾರ್ಯದರ್ಶಿ ಕೆ.ವಿ. ನಾಗರಾಜಮೂರ್ತಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT