ಬೆಳಗಾವಿ: ‘ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಳ್ಳಲಾಗುವುದು. ಶೀಘ್ರವೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭೇಟಿಯಾಗಿ ಈ ಸಂಬಂಧ ಚರ್ಚಿಸಲಾಗುವುದು’ ಎಂದು ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾ (ಆರ್‌ಪಿಐ) ರಾಷ್ಟ್ರೀಯ ಅಧ್ಯಕ್ಷರೂ ಆದ, ಕೇಂದ್ರ ಸಚಿವ ರಾಮದಾಸ್ ಅಠವಳೆ ಹೇಳಿದರು.

ಇಲ್ಲಿನ ಗಾಂಧಿ ಭವನದಲ್ಲಿ ಆರ್‌ಪಿಐ ಭಾನುವಾರ ಹಮ್ಮಿಕೊಂಡಿದ್ದ ರಾಜ್ಯ ಕಾರ್ಯಕಾರಿಣಿ ಹಾಗೂ ಬೆಳಗಾವಿ ಜಿಲ್ಲಾ ಸಮ್ಮೇಳನದಲ್ಲಿ ಅವರು ಮಾತನಾಡಿದರು.

‘ದೇಶದಲ್ಲಿ 6 ದಶಕ ಆಡಳಿತ ನಡೆಸಿದ ಕಾಂಗ್ರೆಸ್‌ನವರು ಜಾತೀಯತೆ ಹೋಗಲಾಡಿಸಲಿಲ್ಲ. ಗಾಂಧೀಜಿ ಕನಸು ನುಚ್ಚುನೂರಾಗಿಸಿದರು. ಮೋದಿ ಪ್ರಧಾನಿಯಾದ ನಂತರ ಭ್ರಷ್ಟಾಚಾರ ನಿರ್ಮೂಲನೆಗೊಳಿಸಿದ್ದಾರೆ. ಹಾಗಾಗಿ ನಾವೂ ಬಿಜೆಪಿ ಜೊತೆಗಿದ್ದೇವೆ’ ಎಂದರು.

‘ರಾಜ್ಯದಲ್ಲಿಯೂ ಪಕ್ಷ ಸಂಘಟನೆಗೆ ಒತ್ತು ನೀಡಿದ್ದೇವೆ. ಕಾರ್ಯಕರ್ತರು ತಮಗೆ ವಹಿಸಿದ ಜವಾಬ್ದಾರಿ ಸಮರ್ಥವಾಗಿ ನಿಭಾಯಿಸಬೇಕು’ ಎಂದು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.