ಮಂಗಳವಾರ, ಜೂನ್ 28, 2022
28 °C

ಸಿ.ಡಿ ಪ್ರಕರಣ: ‌ನ್ಯಾಯಾಲಯದ ಆದೇಶ ಸಿಕ್ಕ ಕೂಡಲೆ ಯುವತಿ ಹಾಜರು: ವಕೀಲ ಜಗದೀಶ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿಗೆ ಸಂಬಂಧಿಸಿದೆ ಎನ್ನಲಾದ ಸಿ.ಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಯುವತಿಯನ್ನು ನ್ಯಾಯಾಲಯದ ಆದೇಶ ಸಿಕ್ಕ ಕೂಡಲೆ ಮ್ಯಾಜಿಸ್ಟ್ರೇಟ್ ಎದುರು ಹಾಜರುಪಡಿಸುತ್ತೇವೆ ಎಂದು ಯುವತಿ ಪರ ವಕೀಲರು ನ್ಯಾಯಾಲಯಕ್ಕೆ ತೆರಳುವ ಮುನ್ನ ಮಾಧ್ಯಮಗಳಿಗೆ ತಿಳಿಸಿದ್ದಾರೆ.

ನ್ಯಾಯಾಲಯದ ಅನುಮತಿ ಸಿಕ್ಕ ಕೂಡಲೇ, ನ್ಯಾಯಾಲಯ ಎಲ್ಲಿ ಹೇಳುತ್ತೋ ಅಲ್ಲಿ ಹಾಜರುಪಡಿಸುತ್ತೇವೆ ಎಂದು ಯುವತಿ ಪರ ವಕೀಲ ಜಗದೀಶ್ ಮಾಧ್ಯಮಗಳಿಗೆ ತಿಳಿಸಿದ್ದಾರೆ. ಯುವತಿ ನ್ಯಾಯಾಲಯದ ಸಮೀಪವೇ ಇದ್ದಾರೆ. ನ್ಯಾಯಾಲಯದ ಆದೇಶದ ಅನ್ವಯ ಮುಂದುವರಿಯುತ್ತೇವೆ ಎಂದರು. ನಿನ್ನೆ ನ್ಯಾಯಾಲಯದಿಂದ ಆದೇಶ ಸಿಗದ ಕಾರಣ ಹಾಜರುಪಡಿಸಿಲ್ಲ ಎಂದು ಸ್ಪಷ್ಟಪಡಿಸಿದರು.

ಇದನ್ನೂ ಓದಿ.. ಸಿ.ಡಿ ಲೇಡಿಗೂ ನನಗೂ‌ ಸಂಬಂಧವಿಲ್ಲ: ಡಿ.ಕೆ.ಶಿವಕುಮಾರ್

ನಮಗೆ ಭದ್ರತೆ ನೀಡುವುದಾಗಿ ನ್ಯಾಯಾಲಯ ಮತ್ತು ಪೊಲೀಸರು ಭರವಸೆ ನೀಡಿದ್ದಾರೆ. ಹಾಗಾಗಿ, ನ್ಯಾಯಾಲಯದ ಆದೇಶಕ್ಕೆ ನಾವು ಬದ್ಧರಾಗಿದ್ದೇವೆ ಎಂದು ಅವರು ಹೇಳಿದ್ದಾರೆ. ತನಿಖಾಧಿಕಾರಿ ಹಾಜರಾದ ಬಳಿಕ ಅವರ ಸಮ್ಮುಖದಲ್ಲೇ ನ್ಯಾಯಾಲಯ ಆದೇಶ ನೀಡಲಿದೆ ಎಂದು ಅವರು ಹೇಳಿದ್ದಾರೆ.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು