ಬೆಂಗಳೂರು: ಮಾಜಿ ಸಚಿವ, ಬಿಜೆಪಿ ಶಾಸಕ ರಮೇಶ ಜಾರಕಿಹೊಳಿ ಸಿ.ಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತೆ ಸಲ್ಲಿಸಿರುವ ಅರ್ಜಿಗಳನ್ನು, ಹೈಕೋರ್ಟ್‌ನ ಜನಪ್ರತಿನಿಧಿಗಳ ವಿಶೇಷ ನ್ಯಾಯಪೀಠಕ್ಕೆ ವರ್ಗಾಯಿಸಲು ಸೂಚಿಸಲಾಗಿದೆ.

ಸಿ.ಡಿ ಪ್ರಕರಣದ ತನಿಖೆಗೆ ಎಸ್‌ಐಟಿ ರಚಿಸಿದ ಆದೇಶವನ್ನು ಪ್ರಶ್ನಿಸಿದ ಮತ್ತು ರಮೇಶ ಜಾರಕಿಹೊಳಿ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಗೆ ನೀಡಿದ್ದ ಬ್ಲಾಕ್‌ಮೇಲ್ ದೂರು ಆಧರಿಸಿ ಪೊಲೀಸರು ದಾಖಲಿಸಿರುವ ಎಫ್‌ಐಆರ್ ರದ್ದು ಕೋರಿ ಸಂತ್ರಸ್ತೆ ಸಲ್ಲಿಸಿರುವ ಎರಡು ಪ್ರತ್ಯೇಕ ಅರ್ಜಿಗಳು, ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠದ ಮುಂದೆ ಸೋಮವಾರ ವಿಚಾರಣೆಗೆ ನಿಗದಿಯಾಗಿದ್ದವು.

ವಿಚಾರಣೆ ವೇಳೆ ನ್ಯಾಯಮೂರ್ತಿಗಳು, ‘ರಮೇಶ ಜಾರಕಿಹೊಳಿ ಶಾಸಕರಾಗಿದ್ದು, ಜನಪ್ರತಿನಿಧಿಗಳಿಗೆ ಸಂಬಂಧಿಸಿದ ಪ್ರಕರಣಗಳನ್ನು ವಿಚಾರಣೆ ನಡೆಸಲು ಇಲ್ಲೇ ವಿಶೇಷ ನ್ಯಾಯಪೀಠವಿದೆ. ಹೀಗಾಗಿ, ಆ ನ್ಯಾಯಪೀಠದ ಮುಂದೆಯೇ ಈ ಅರ್ಜಿಗಳನ್ನು ವಿಚಾರಣೆಗೆ ನಿಗದಿಪಡಿಸುವುದು ಸೂಕ್ತ. ಆದ್ದರಿಂದ ಈ ಕಡತವನ್ನು ಮುಖ್ಯ ನ್ಯಾಯಮೂರ್ತಿ ಅವರ ಮುಂದೆ ಮಂಡಿಸಿ ಒಪ್ಪಿಗೆ ಪಡೆಯಲು ರಿಜಿಸ್ಟ್ರಾರ್ ಜನರಲ್ ಅವ ರಿಗೆ ಸೂಚಿಸಲಾಗುವುದು’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.