ಶುಕ್ರವಾರ, ಏಪ್ರಿಲ್ 23, 2021
30 °C

ಸಿ.ಡಿ.: ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡ ಮಹಿಳಾ ಆಯೋಗ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

dh file

ಬೆಂಗಳೂರು: ಶಾಸಕ ರಮೇಶ ಜಾರಕಿಹೊಳಿ ಅವರಿಗೆ ಸಂಬಂಧಪಟ್ಟಿದ್ದು ಎನ್ನಲಾದ ಸಿ.ಡಿ ಪ್ರಕರಣದಲ್ಲಿ ಕರ್ನಾಟಕ ರಕ್ಷಣಾ ವೇದಿಕೆಯ ಮನವಿ ಆಧರಿಸಿ ಕರ್ನಾಟಕ ರಾಜ್ಯ ಮಹಿಳಾ ಆಯೋಗವು ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡಿದೆ.

‌‘ಸಂತ್ರಸ್ತ ಮಹಿಳೆಗೆ ರಕ್ಷಣೆ ಒದಗಿಸುವಂತೆ ಕರ್ನಾಟಕ ರಕ್ಷಣಾ ವೇದಿಕೆ ಮನವಿ ಮಾಡಿಕೊಂಡಿದೆ. ಈ ಪ್ರಕರಣವನ್ನು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಮಹಿಳೆಯು ಆಯೋಗಕ್ಕೆ ಯಾವುದೇ ದೂರನ್ನು ಈವರೆಗೂ ನೀಡಿಲ್ಲ. ಆದ್ದರಿಂದ ನಾವು ವಿಚಾರಣೆ ನಡೆಸಲು ಸಾಧ್ಯವಿಲ್ಲ. ಮಹಿಳೆಗೆ ಜೀವ ಬೆದರಿಕೆ ಇದೆ ಎಂಬ ಕಾರಣಕ್ಕೆ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಹೆಣ್ಣು ಮಗಳು ನಮ್ಮನ್ನು ಸಂಪರ್ಕಿಸಿದಲ್ಲಿ ಅವರಿಗೆ ಅಗತ್ಯ ರಕ್ಷಣೆ ಒದಗಿಸಲಾಗುತ್ತದೆ. ಪೊಲೀಸರು ತನಿಖಾ ವರದಿ ನೀಡಿದ ಬಳಿಕ ಮುಂದಿನ ಕ್ರಮ ಕೈಗೊಳ್ಳಲಾಗುವುದು’ ಎಂದು ಆಯೋಗದ ಅಧ್ಯಕ್ಷೆ ಪ್ರಮೀಳಾ ನಾಯ್ಡು ತಿಳಿಸಿದರು.

‘ನೆರವು ಬಯಸಿ ಆಯೋಗದ ಕದ ತಟ್ಟುವ ಅಸಹಾಯಕ, ಸಂತ್ರಸ್ತ ಮಹಿಳೆಯರಿಗೆ ಅಗತ್ಯ ನೆರವನ್ನು ಒದಗಿಸಲು ಬದ್ಧವಾಗಿದ್ದೇವೆ. ಅವರ ಗೌಪ್ಯತೆಯನ್ನು ಕೂಡ ಕಾಯ್ದುಕೊಂಡು, ಅಗತ್ಯ ರಕ್ಷಣೆಯನ್ನು ನೀಡುತ್ತೇವೆ. ಈ ಬಗ್ಗೆ ಯಾವುದೇ ಸಂದೇಹ ಬೇಡ’ ಎಂದು ಹೇಳಿದರು.

 

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು