ಮಂಗಳವಾರ, ಸೆಪ್ಟೆಂಬರ್ 28, 2021
21 °C

ಸಿ.ಡಿ. ಪ್ರಕರಣ: ಎಸ್‌ಐಟಿ ಮುಖ್ಯಸ್ಥ ಸೌಮೇಂದು ಮುಖರ್ಜಿ ರಜೆ ವಿಸ್ತರಣೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಬಿಜೆಪಿ ಶಾಸಕ ರಮೇಶ ಜಾರಕಿಹೊಳಿ ಅವರಿಗೆ ಸೇರಿದ್ದು ಎನ್ನಲಾದ ಸಿ.ಡಿ. ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡದ (ಎಸ್‌ಐಟಿ) ಮುಖ್ಯಸ್ಥ ಸೌಮೇಂದು ಮುಖರ್ಜಿ ಅವರ ರಜೆ ಅವಧಿಯನ್ನು ಮತ್ತೊಂದು ತಿಂಗಳು ವಿಸ್ತರಿಸಲಾಗಿದೆ.

ನಗರದ ಹೆಚ್ಚುವರಿ ಪೊಲೀಸ್ ಕಮಿಷನರ್ ಸಹ ಆಗಿರುವ ಸೌಮೆಂದು, ಕಬ್ಬನ್ ಪಾರ್ಕ್ ಹಾಗೂ ಸದಾಶಿವನಗರ ಠಾಣೆಗಳಲ್ಲಿ ಪ್ರಕರಣ ದಾಖಲಾದ ದಿನದಿಂದಲೂ ತನಿಖೆ ಹೊಣೆ ಹೊತ್ತಿದ್ದರು. ಪ್ರಕರಣದಲ್ಲಿ ಹಲವು ತಿರುವುಗಳು ಸಿಕ್ಕಿದ್ದವು.

ಇದರ ನಡುವೆಯೇ, ಕುಟುಂಬದವರ ಆರೋಗ್ಯ ಸಮಸ್ಯೆ ಕಾರಣ ನೀಡಿ ಸೌಮೇಂದು ರಜೆ ಪಡೆದಿದ್ದರು. ಇದೀಗ ಪುನಃ ರಜೆ ಅವಧಿಯನ್ನು ವಿಸ್ತರಿಸಿಕೊಂಡಿದ್ದಾರೆ. ಹೀಗಾಗಿ, ತನಿಖೆ ಜವಾಬ್ದಾರಿಯನ್ನು ಸಿಸಿಬಿಯ ಜಂಟಿ ಕಮಿಷನರ್ ಸಂದೀಪ್ ಪಾಟೀಲ ಅವರಿಗೆ ನೀಡಲಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು