ಮಂಗಳವಾರ, ಮೇ 11, 2021
28 °C

ಮಗಳನ್ನು ಗೋವಾಕ್ಕೆ ಕಳುಹಿಸಿದ್ದೇ ಡಿ.ಕೆ.ಶಿವಕುಮಾರ್: ಯುವತಿ ಪೋಷಕರು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಬಿಜೆಪಿ ಶಾಸಕ ರಮೇಶ ಜಾರಕಿಹೊಳಿ ಅವರಿಗೆ ಸಂಬಂಧಪಟ್ಟಿದ್ದು ಎನ್ನಲಾದ ಸಿ.ಡಿ. ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ತಂಡದ (ಎಸ್ಐಟಿ) ಮುಂದೆ ಶನಿವಾರ ಹಾಜರಾಗಿರುವ ಸಿ.ಡಿ.ಯಲ್ಲಿದ್ದ ಯುವತಿಯ ಪೋಷಕರು, ಎಲ್ಲ ಸಾಕ್ಷ್ಯಗಳನ್ನು ಅಧಿಕಾರಿಗಳಿಗೆ ನೀಡಿರುವುದಾಗಿ ತಿಳಿಸಿದ್ದಾರೆ.

‘ನನ್ನ ಮಗಳನ್ನು ಮುಂದಿಟ್ಟುಕೊಂಡು ಡಿ.ಕೆ.ಶಿವಕುಮಾರ್ ಹೊಲಸು ರಾಜಕಾರಣ ಮಾಡುತ್ತಿದ್ದಾರೆ. ನನ್ನ ಮಗಳಿಗೆ ಹಾಗೂ ನನ್ನ ಕುಟುಂಬಕ್ಕೆ ಯಾವುದೇ ತೊಂದರೆಯಾದರೂ ಡಿ.ಕೆ. ಶಿವಕುಮಾರ್ ಅವರೇ ಹೊಣೆಗಾರರು’ ಎಂದು ಸಿ.ಡಿ.ಯಲ್ಲಿದ್ದಾಳೆ ಎನ್ನಲಾದ ಯುವತಿ ತಂದೆ ಹೇಳಿದರು.

ಎಸ್‌ಐಟಿ ಅಧಿಕಾರಿಗಳ ಎದುರು ಶನಿವಾರ ಹಾಜರಾಗಿ ಹೇಳಿಕೆ ನೀಡಿದ ಬಳಿಕ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಮಗಳನ್ನು ನೆನೆದು ಕಣ್ಣೀರಿಟ್ಟರು. ಡಿ.ಕೆ. ಶಿವಕುಮಾರ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ, ‘ನನ್ನ ಮಗಳನ್ನು ಕರೆದುಕೊಂಡು ಬಂದು ಒಪ್ಪಿಸಿ’ ಎಂದು ಆಗ್ರಹಿಸಿದರು. 

ನಮ್ಮ ಬಳಿ ಸಾಕ್ಷ್ಯಗಳಿದ್ದು, ಅಧಿಕಾರಿಗಳಿಗೆ ನೀಡಿದ್ದೇವೆ ಎಂದು ಯುವತಿ ಪೋಷಕರು ಶನಿವಾರ ಸಂಜೆ ಸುದ್ದಿಗಾರರಿಗೆ ತಿಳಿಸಿದರು. 

ಇದನ್ನೂ ಓದಿ: 

ಪ್ರಕರಣ ಸಂಬಂಧ ಮಾಹಿತಿ ಕಲೆಹಾಕಲು ಎಸ್ಐಟಿ ಅಧಿಕಾರಿಗಳು, ಯುವತಿ ಹಾಗೂ ಅವರ ಪೋಷಕರಿಗೆ ನೋಟಿಸ್ ನೀಡಿದ್ದರು. ಇದರಂತೆ ಶನಿವಾರ ಬೆಳಗ್ಗೆ ಯುವತಿಯ ತಂದೆ-ತಾಯಿ ಹಾಗೂ ಇಬ್ಬರು ಸಹೋದರರು ವಿಚಾರಣೆಗೆ ಹಾಜರಾಗಿದ್ದರು. 

ಅಜ್ಞಾತ ಸ್ಥಳದಲ್ಲಿರುವ ಯುವತಿ, ಈಗಾಗಲೇ ನಾಲ್ಕು ವಿಡಿಯೊ ಹರಿಬಿಟ್ಟಿದ್ದಾರೆ. ಆದರೆ ತಮ್ಮ ಮಗಳು ಎಲ್ಲಿ ಇದ್ದಾರೆ ಎಂಬುದು ತಿಳಿದಿಲ್ಲ ಎಂದು ಯುವತಿ ಪೋಷಕರು ಆರೋಪಿಸಿದ್ದಾರೆ.

ಇವುಗಳನ್ನೂ ಓದಿ:

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು