ಬೆಂಗಳೂರು: ಚರ್ಚೆಗೆ ಗ್ರಾಸವಾಗಿದ್ದ ಬಿಜೆಪಿ ಶಾಸಕ ರಮೇಶ ಜಾರಕಿಹೊಳಿ ಅವರಿಗೆ ಸೇರಿದ್ದುಎನ್ನಲಾದ ಸಿ.ಡಿ. ಪ್ರಕರಣದ ತನಿಖೆ ಸದ್ಯ ತಟಸ್ಥವಾಗಿದೆ. ತನಿಖೆಗೆ ನಿಯೋಜಿಸಿದ್ದ ಎಸ್ಐಟಿ ಅಧಿಕಾರಿಗಳನ್ನು ಕರ್ಫ್ಯೂ ಕರ್ತವ್ಯಕ್ಕೆ ನಿಯೋಜಿಸಲಾಗಿದೆ.

ಸಂತ್ರಸ್ತೆ ಕಬ್ಬನ್ ಪಾರ್ಕ್ ಠಾಣೆಗೆ ದೂರು ನೀಡಿದ್ದರು. ‘ಸಿ.ಡಿ. ಇಟ್ಟುಕೊಂಡು ಕೆಲವರು ಬ್ಲ್ಯಾಕ್ಮೇಲ್ ಮಾಡಿದ್ದಾರೆ’ ಎಂದು ಆರೋಪಿಸಿ ರಮೇಶ ಜಾರಕಿಹೊಳಿ ಅವರೂ ಸದಾಶಿವನಗರ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು.

ಎರಡೂ ಪ್ರಕರಣದ ತನಿಖೆಗೆ ಬೆಂಗಳೂರು ಹೆಚ್ಚುವರಿ ಪೊಲೀಸ್ ಕಮಿಷನರ್ ಸೌಮೇಂದು ಮುಖರ್ಜಿ ನೇತೃತ್ವದಲ್ಲಿ ಎಸ್ಐಟಿ ರಚಿಸಲಾಗಿತ್ತು. ಅಜ್ಞಾತ ಸ್ಥಳದಲ್ಲಿದ್ದ ಯುವತಿ ನೇರವಾಗಿ ನ್ಯಾಯಾಲಯಕ್ಕೆ ತೆರಳಿ ಹೇಳಿಕೆ ದಾಖಲಿಸಿದ್ದರು. ಹೇಳಿಕೆ ಆಧರಿಸಿ ತನಿಖೆ ನಡೆಸಿದ್ದ ಎಸ್ಐಟಿ, ವೈದ್ಯಕೀಯ ಪರೀಕ್ಷೆ ಹಾಗೂ ಮಹಜರು ಪೂರ್ಣಗೊಳಿಸಿತ್ತು.

ವಿಚಾರಣೆಗೆ ಹಾಜರಾಗುವಂತೆ ರಮೇಶ ಜಾರಕಿಹೊಳಿ ಅವರಿಗೂ ನೋಟಿಸ್ ನೀಡಿತ್ತು. ಕೊರೊನಾ ಸೋಂಕು ತಗುಲಿದೆ ಎಂದು ಅವರು ಆಸ್ಪತ್ರೆಗೆ ದಾಖಲಾಗಿದ್ದರು. ಚೇತರಿಸಿಕೊಂಡ ಬಳಿಕ ಎಸ್ಐಟಿ ಮತ್ತೆ ನೋಟಿಸ್ ನೀಡಿತ್ತು. ಆದರೆ, ಹೋಂ ಐಸೋಲೇಷನ್ ಕಾರಣ ನೀಡಿ ವಿಚಾರಣೆಗೆ ಗೈರಾಗಿದ್ದಾರೆ. ಮತ್ತೆ ನೋಟಿಸ್ ನೀಡಿಲ್ಲವೆಂದು ಮೂಲಗಳು ಹೇಳಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.