ರಮೇಶ ಕಾಂಗ್ರೆಸ್ ಸೇರುವುದು 8ನೇ ಅದ್ಭುತ: ಸತೀಶ ಜಾರಕಿಹೊಳಿ

ಬೆಳಗಾವಿ: ‘ಗೋಕಾಕದ ಶಾಸಕ ರಮೇಶ ಜಾರಕಿಹೊಳಿ ಮತ್ತೆ ಕಾಂಗ್ರೆಸ್ ಸೇರುವುದು 8ನೇ ಅದ್ಭುತ. ಸದ್ಯ ಬಿಜೆಪಿಯಲ್ಲಿದ್ದಾರೆ. ಅಲ್ಲೇ ಇದ್ದರೆ ಸರಿ’ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಪ್ರತಿಕ್ರಿಯಿಸಿದರು.
ಇಲ್ಲಿ ಪತ್ರಕರ್ತರೊಂದಿಗೆ ಶನಿವಾರ ಮಾತನಾಡಿದ ಅವರು, ‘ಬಿಜೆಪಿಯ ವಿಧಾನಪರಿಷತ್ ಸದಸ್ಯ ಲಕ್ಷ್ಮಣ ಸವದಿ ಅವರು ಕಾಂಗ್ರೆಸ್ ಸೇರುವ ವಿಷಯ ನನಗೆ ಗೊತ್ತಿಲ್ಲ. ಇತರ ಪಕ್ಷಗಳ ಹಲವರು ಕಾಂಗ್ರೆಸ್ ಸೇರುವುದು ನಿಜ. ಆದರೆ, ಅದೆಲ್ಲವೂ ಬೆಂಗಳೂರು ಹಂತದಲ್ಲಿ ನಡೆಯುತ್ತದೆ. ಯಾರಾರು ಬರುತ್ತಾರೆ ಎನ್ನುವ ಮಾಹಿತಿ ಇಲ್ಲ’ ಎಂದು ಹೇಳಿದರು.
‘ಪಕ್ಷಾಂತರ ಪರ್ವವು ಮುಂದಿನ ವರ್ಷ ಫೆಬ್ರುವರಿಗೆ ಆರಂಭವಾಗಲಿದೆ. ಸದ್ಯಕ್ಕೆ ಸೀಟು ಬ್ಲಾಕ್ ಮಾಡುವ ಕೆಲಸವಷ್ಟೆ ನಡೆಯುತ್ತಿದೆ. ಆದರೆ, ಸದ್ಯಕ್ಕೆ ಆಸನ ಖಚಿತವಾಗುವುದಿಲ್ಲ’ ಎಂದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.