ನಾನು ನೀಡಿದ ಮಾಹಿತಿ ಆಧರಿಸಿ ದೂರು ದಾಖಲಾಗುವ ವಿಶ್ವಾಸವಿದೆ: ದಿನೇಶ್ ಕಲ್ಲಹಳ್ಳಿ

ಬೆಂಗಳೂರು: ರಮೇಶ್ ಜಾರಕಿಹೊಳಿ ಅವರಿಗೆ ಸಂಬಂಧಪಟ್ಟಿದ್ದು ಎನ್ನಲಾದ ಸಿ.ಡಿ ಪ್ರಕರಣದ ವಿಚಾರಣೆಗೆ ಹಾಜರಾಗಿದ್ದ ದೂರುದಾರ ದಿನೇಶ್ ಕಲ್ಲಹಳ್ಳಿ, ಪೊಲೀಸರ ಪ್ರಶ್ನೆಗಳಿಗೆ ಉತ್ತರಿಸಿ ಹೋಗಿದ್ದಾರೆ.
ಗುರುವಾರ ಮಧ್ಯಾಹ್ನ 2 ಗಂಟೆ ಸುಮಾರಿಗೆ ಕಬ್ಬನ್ ಪಾರ್ಕ್ ಠಾಣೆಗೆ ಹಾಜರಾದ ದಿನೇಶ್, ಇನ್‌ಸ್ಪೆಕ್ಟರ್, ಎಸಿಪಿ ಹಾಗೂ ಡಿಸಿಪಿ ಅವರ ಪ್ರಶ್ನೆಗಳಿಗೆ ಉತ್ತರಿಸಿದರು. ಪ್ರಕರಣ ಸಂಬಂಧ ಮತ್ತಷ್ಟು ಮಾಹಿತಿ ನೀಡಿದರು. ಮಾಹಿತಿ ಪಡೆದುಕೊಂಡ ಪೊಲೀಸರು, ಅವರನ್ನು ವಾಪಸು ಕಳುಹಿಸಿದರು.
ಠಾಣೆಯಿಂದ ಹೊರಗೆ ಬಂದು ಸುದ್ದಿಗಾರರ ಜೊತೆ ಮಾತನಾಡಿದ ದಿನೇಶ್, ‘ನನ್ನಲ್ಲಿರುವ ಸಂಪೂರ್ಣ ಮಾಹಿತಿಯನ್ನು ಪೊಲೀಸರಿಗೆ ಕೊಟ್ಟಿದ್ದೇನೆ. ಅದಕ್ಕೆ ಪೂರಕವಾಗಿ ಪೊಲೀಸರು ದೂರು ದಾಖಲಿಸಿಕೊಳ್ಳುವ ವಿಶ್ವಾಸವಿದೆ’ ಎಂದರು.
‘ಯುವತಿ ನನ್ನ ಸಂಪರ್ಕದಲ್ಲಿ ಇಲ್ಲ. ಅವರ ಕುಟುಂಬಸ್ಥರೊಬ್ಬರು ನನ್ನನ್ನು ಭೇಟಿಯಾಗಿದ್ದರು. ಯುವತಿ ಪರ ಹೋರಾಟ ಮಾಡಿ ಎಂದಿದ್ದಕ್ಕೆ ಪೊಲೀಸರಿಗೆ ದೂರು ನೀಡಿದ್ದೇನೆ. ನನ್ನ ದೂರಿಗೆ ಬದ್ಧನಾಗಿದ್ದೇನೆ. ಸತ್ಯಾಂಶ ಏನಿದೆ ಎಂಬುದನ್ನು ಬಯಲಿಗೆ ತನ್ನಿ ಎಂದು ಪೊಲೀಸರನ್ನು ಕೋರಿದ್ದೇನೆ. ತನಿಖೆ ದೃಷ್ಟಿಯಿಂದ ಉಳಿದೆಲ್ಲ ಮಾಹಿತಿಯನ್ನು ಮಾಧ್ಯಮದ ಮೂಲಕ ಹೇಳಲು ಆಗುವುದಿಲ್ಲ’ ಎಂದೂ ಹೇಳಿದರು.
ಇದನ್ನೂ ಓದಿ...
ಜಾರಕಿಹೊಳಿ ಸಿ.ಡಿ ಪ್ರಕರಣ: ಪೊಲೀಸರ ಎದುರು ಹಾಜರಾದ ದೂರುದಾರ ದಿನೇಶ್ ಕಲ್ಲಹಳ್ಳಿ
ರಮೇಶ ಜಾರಕಿಹೊಳಿ ಸಿ.ಡಿ ಪ್ರಕರಣದಲ್ಲಿ ₹ 5 ಕೋಟಿ ಡೀಲ್ ನಡೆದಿದೆ: ಕುಮಾರಸ್ವಾಮಿ
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.