ಬುಧವಾರ, ಆಗಸ್ಟ್ 17, 2022
25 °C

ಸುರ್ಜೇವಾಲಾ ನೇತೃತ್ವದಲ್ಲಿ ‘ಕೈ’ ನಾಯಕರ ಸಭೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಪಕ್ಷದ ರಾಜ್ಯ ಉಸ್ತುವಾರಿ ರಣದೀಪ್‌ ಸಿಂಗ್‌ ಸುರ್ಜೇವಾಲಾ ನೇತೃತ್ವದಲ್ಲಿ ಇದೇ 6ರಂದು ನಗರದ ಅರಮನೆ ಮೈದಾನದಲ್ಲಿ ಕಾಂಗ್ರೆಸ್‌ ಪಕ್ಷದ ಮುಖಂಡರ ಸಭೆ ನಡೆಯಲಿದೆ.

‘ಅಂದು ಮಧ್ಯಾಹ್ನ 3.30ಕ್ಕೆ ನಡೆಯಲಿರುವ ಸಭೆಯಲ್ಲಿ ಮಾಜಿ ಸಚಿವರು, ಹಾಲಿ ಮತ್ತು ಮಾಜಿ ಶಾಸಕರು, ಹಾಲಿ ಮತ್ತು ಮಾಜಿ ಸಂಸದರು, ಜಿಲ್ಲಾ ಕಾಂಗ್ರೆಸ್‌ ಘಟಕಗಳ ಅಧ್ಯಕ್ಷರು, ಪಕ್ಷದ ವಿವಿಧ ಮುಂಚೂಣಿ ಘಟಕಗಳ ಪ್ರಮುಖರು ಭಾಗವಹಿಸಲಿದ್ದಾರೆ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ತಿಳಿಸಿದ್ದಾರೆ.

‘ಗ್ರಾಮ ಪಂಚಾಯಿತಿ ಚುನಾವಣೆ ಮತ್ತು ಉಪ ಚುನಾವಣೆಯನ್ನು ಗಮನದಲ್ಲಿಟ್ಟು ಪಕ್ಷ ಸಂಘಟನೆ ಮತ್ತು ಬಲವರ್ಧನೆ ಉದ್ದೇಶದಿಂದ ಈ ಸಭೆ ಆಯೋಜಿಸಲಾಗಿದೆ’ ಎಂದೂ ಅವರು ಹೇಳಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು