ಶನಿವಾರ, ಜೂನ್ 25, 2022
24 °C

ಸಂಪುಟದಲ್ಲೂ ಹೊಸಬರಿಗೆ ಅವಕಾಶ ಸಿಗಲಿ: ಶಾಸಕ ಅಪ್ಪಚ್ಚು ರಂಜನ್‌

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಮಡಿಕೇರಿ: ‘ಮುಖ್ಯಮಂತ್ರಿ ಬದಲಾದರೆ ಸಚಿವ ಸಂಪುಟಕ್ಕೂ ಹೊಸಬರ ಸೇರ್ಪಡೆ ಆಗಬೇಕು. ನಾನೂ ಸಹ ಸಚಿವ ಸ್ಥಾನದ ಆಕಾಂಕ್ಷಿ’ ಎಂದು ಮಡಿಕೇರಿ ಕ್ಷೇತ್ರದ ಶಾಸಕ ಎಂ.ಪಿ.ಅಪ್ಪಚ್ಚು ರಂಜನ್‌ ಇಲ್ಲಿ ಸೋಮವಾರ ಹೇಳಿದರು.

‘ನಾನೂ ಐದು ಬಾರಿ ಗೆದ್ದಿದ್ದೇನೆ. ಸಿ.ಎಂ ಬದಲಾದರೆ ಸಚಿವ ಸಂಪುಟವೂ ಬದಲಾಗಲಿದೆ. ಆಗ ನನಗೆ ಸಚಿವ ಸ್ಥಾನ ಕೊಡಲೇ ಬೇಕು. ಹೈಕಮಾಂಡ್‌ ತೀರ್ಮಾನಕ್ಕೆ ಬದ್ಧ ಇರುತ್ತೇನೆ’ ಎಂದು ಹೇಳಿದರು.

‘ನಾಯಕತ್ವ ಬದಲಾವಣೆಯ ಚರ್ಚೆಯಿಂದ ಬಿ.ಎಸ್‌.ಯಡಿಯೂರಪ್ಪ, ಅವರಿಗೆ ಬೇಸರವಾಗಿದೆ. ಯಡಿಯೂರಪ್ಪ ಅವರು ಈಗಲೂ ನಮ್ಮ ನಾಯಕರು. ಹೈಕಮಾಂಡ್ ಯಾವ ತೀರ್ಮಾನ ಕೈಗೊಳ್ಳುವುದೋ ಗೊತ್ತಿಲ್ಲ’ ಎಂದು ಪ್ರತಿಕ್ರಿಯಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು