ಬುಧವಾರ, ಆಗಸ್ಟ್ 10, 2022
25 °C

ಸಾಮೂಹಿಕ ಅತ್ಯಾಚಾರ: ಮೂವರ ಬಂಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಚಿತ್ರದುರ್ಗ: ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದ ತನಿಖೆಯನ್ನು ತೀವ್ರಗೊಳಿಸಿದ ಪೊಲೀಸರು ಪತಿ ಸೇರಿ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಮತ್ತೊಬ್ಬ ಆರೋಪಿ ತಲೆಮರೆಸಿಕೊಂಡಿದ್ದಾನೆ.

17 ವರ್ಷದ ಬಾಲಕಿ ಮೇಲೆ ಪತಿ ಹಾಗೂ ಆತನ ಸ್ನೇಹಿತರೇ ಸಾಮೂಹಿಕ ಅತ್ಯಾಚಾರ ನಡೆಸಿದ್ದ ಘಟನೆ ಜೂನ್‌ 25ರಂದು ಬೆಳಕಿಗೆ ಬಂದಿತ್ತು. ಬಾಲಕಿಯ 35 ವರ್ಷದ ಪತಿ, ಈತನ ಸ್ನೇಹಿತ ಶಹಬಾಜ್‌ (28) ಹಾಗೂ ದಾದಾಪೀರ್‌ (20) ಎಂಬುವರನ್ನು ಬಂಧಿಸಿ ಜೈಲಿಗೆ ಕಳುಹಿಸಲಾಗಿದೆ.

ಬಾಲಕಿ ಮತ್ತು ಆರೋಪಿ ಪತಿ ಪ್ರೀತಿಸಿ ಮದುವೆಯಾಗಿದ್ದರು. 2020ರಲ್ಲಿ ಬಾಲಕಿ 16 ವರ್ಷದವರಾಗಿದ್ದಾಗಲೇ ವಿವಾಹವಾಗಿದ್ದನು. ಆದರೆ, ಇತ್ತೀಚಿಗೆ ದಾಂಪತ್ಯದಲ್ಲಿ ಬಿರುಕು ಕಾಣಿಸಿಕೊಂಡಿತ್ತು. ಪತ್ನಿಯ ಶೀಲ ಶಂಕಿಸಿ ಆಗಾಗ ಗಲಾಟೆ ಮಾಡುತ್ತಿದ್ದನು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಜೂನ್‌ 7ರಂದು ತವರಿನಿಂದ ಮನೆಗೆ ಬಂದ ಪತ್ನಿಯನ್ನು ಆರೋಪಿ ಪತಿ ಚೆಳುಗುಡ್ಡದ ನಿರ್ಮಾಣ ಹಂತದ ಕಟ್ಟಡವೊಂದಕ್ಕೆ ಕರೆದೊಯ್ದಿದ್ದ. ಈತನ ಸ್ನೇಹಿತರು ಬಾಲಕಿಯ ದೇಹವನ್ನು ಸಿಗರೇಟಿನಿಂದ ಸುಟ್ಟಿದ್ದರು. ಬಳಿಕ ಅತ್ಯಾಚಾರ ನಡೆಸಿ ಕೊಲೆ ಬೆದರಿಕೆ ಹಾಕಿದ್ದರು. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಗಳ ಪತ್ತೆಗೆ ಕಾರ್ಯಪ್ರವೃತ್ತರಾಗಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು