ಶನಿವಾರ, ನವೆಂಬರ್ 28, 2020
26 °C

ಅತ್ಯಾಚಾರ ಆರೋ‍ಪ; ಪಿಎಸ್‌ಐ ಅಮಾನತು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ಯುವತಿಯೊಬ್ಬರ ಮೇಲೆ ಅತ್ಯಾಚಾರವೆಸಗಿದ ಆರೋಪ ಎದುರಿಸುತ್ತಿರುವ ಚಾಮರಾಜಪೇಟೆ ಠಾಣೆಯ ಸಬ್ ಇನ್‌ಸ್ಪೆಕ್ಟರ್ (ಪಿಎಸ್ಐ) ವಿಶ್ವನಾಥ್ ಬಿರಾದಾರ ಅವರನ್ನು ಸೇವೆಯಿಂದ ಅಮಾನತು ಮಾಡಲಾಗಿದೆ.

ಈ ಸಂಬಂಧ ನಗರ ಪೊಲೀಸ್ ಕಮಿಷನರ್ ಕಮಲ್ ಪಂತ್ ಆದೇಶ ಹೊರಡಿಸಿದ್ದಾರೆ.

‘ವಿಶ್ವನಾಥ್ ಹಾಗೂ ಬೆಂಗಳೂರಿನ 30 ವರ್ಷದ ಯುವತಿ ನಡುವೆ ಸ್ನೇಹ ಏರ್ಪಟ್ಟಿತ್ತು ಎನ್ನಲಾಗಿದೆ. ಯುವತಿ ವಿರುದ್ಧ ಧರ್ಮಸ್ಥಳ ಠಾಣೆಗೆ ದೂರು ನೀಡಿದ್ದ ವಿಶ್ವನಾಥ್, ‘ಯುವತಿ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ನನ್ನನ್ನು ಬೆದರಿಸುತ್ತಿದ್ದಾರೆ’ ಎಂದಿದ್ದರು. ಅದಕ್ಕೆ ಪ್ರತಿ ದೂರು ನೀಡಿದ್ದ ಯುವತಿ, ‘ಮದುವೆ ಮಾಡಿಕೊಳ್ಳುವುದಾಗಿ ಹೇಳಿದ್ದ ವಿಶ್ವನಾಥ್, ಧರ್ಮಸ್ಥಳಕ್ಕೆ ಕರೆದೊಯ್ದು ನನ್ನ ಮೇಲೆ ಅತ್ಯಾಚಾರ ಎಸಗಿದ್ದಾರೆ’ ಎಂದಿದ್ದರು’ ಎಂಬುದಾಗಿ ಮೂಲಗಳು ತಿಳಿಸಿವೆ.

’ಕರ್ತವ್ಯನಿರತ ಪಿಎಸ್‌ಐ ಮೇಲೆ ದಾಖಲಾಗಿದ್ದ ಪ್ರಕರಣದ ಬಗ್ಗೆ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಎಸ್ಪಿ, ನಗರ ಪೊಲೀಸ್ ಕಮಿಷನರ್ ಅವರಿಗೆ ವರದಿ ಕಳುಹಿಸಿದ್ದರು. ಆ ವರದಿ ಆಧರಿಸಿ ವಿಶ್ವನಾಥ್ ಬಿರಾದಾರ ಅವರನ್ನು ಸೇವೆಯಿಂದ ಅಮಾನತುಗೊಳಿಸಲಾಗಿದೆ. ಇಲಾಖಾ ವಿಚಾರಣೆಗೆ ಆದೇಶಿಸಲಾಗಿದೆ’ ಎಂದೂ ಮೂಲಗಳು ಹೇಳಿವೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು