ಮಂಗಳವಾರ, ಆಗಸ್ಟ್ 16, 2022
21 °C

ಶರತ್ ವರ್ಗಾವಣೆ: ವಿಚಾರಣೆ ಡಿ.11ಕ್ಕೆ ಮುಂದೂಡಿಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಮೈಸೂರು ಜಿಲ್ಲಾಧಿಕಾರಿ ಹುದ್ದೆಯಿಂದ ದಿಢೀರ್ ವರ್ಗಾವಣೆ ಪ್ರಶ್ನಿಸಿ ಕೇಂದ್ರ ಆಡಳಿತ ಮಂಡಳಿಗೆ (ಸಿಎಟಿ) ಬಿ.ಶರತ್ ಸಲ್ಲಿಸಿರುವ ಅರ್ಜಿ ವಿಚಾರಣೆ ಡಿ.11ಕ್ಕೆ ಮುಂದೂಡಿಕೆಯಾಗಿದೆ.

ಸರ್ಕಾರದ ಪರ ವಕೀಲರು ಸಿಎಟಿ ಮುಂದೆ ಹಾಜರಾಗಿ ತಮ್ಮ ವಾದ ಮಂಡಿಸಿದ್ದಾರೆ. ಈಗ ಜಿಲ್ಲಾಧಿಕಾರಿಯಾಗಿರುವ ರೋಹಿಣಿ ಸಿಂಧೂರಿ ಪರ ವಕೀಲರು ಅಭಿಪ್ರಾಯ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಮುಂದಿನ ವಿಚಾರಣೆ ದಿನವೇ ತೀರ್ಪು ಪ್ರಕಟವಾಗುವ ಸಾಧ್ಯತೆ ಇದೆ ಎಂದು ಸಿಎಟಿ ಮೂಲಗಳು ತಿಳಿಸಿವೆ.

ಕಲಬುರ್ಗಿ ಜಿಲ್ಲಾಧಿಕಾರಿಯಾಗಿದ್ದ ಶರತ್ ಅವರನ್ನು ಮೈಸೂರಿಗೆ ವರ್ಗಾವಣೆ ಮಾಡಲಾಗಿತ್ತು. ಅದಾದ ಒಂದೇ ತಿಂಗಳಲ್ಲಿ ಆ ಜಾಗಕ್ಕೆ ರೋಹಿಣಿ ಸಿಂಧೂರಿ ಅವರನ್ನು ವರ್ಗಾವಣೆ ಮಾಡಿತ್ತು. ಇದು ನಿಯಮ ಬಾಹಿರ ಆದೇಶವಾಗಿದ್ದು, ರದ್ದುಗೊಳಿಸಬೇಕು ಎಂದು ಶರತ್ ಅರ್ಜಿ ಸಲ್ಲಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು