ಸೋಮವಾರ, ಮೇ 23, 2022
26 °C

ರಾಠೋಡ್ ಪ್ರಕರಣ ನೀತಿ ನಿರೂಪಣಾ ಸಮಿತಿಗೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ‘ವಿಧಾನ ಪರಿಷತ್‌ನ ಕಾಂಗ್ರೆಸ್‌ ಸದಸ್ಯ ಪ್ರಕಾಶ್ ರಾಠೋಡ್‌ ಅವರು ಶುಕ್ರವಾರ ಸದನದೊಳಕ್ಕೆ ಮೊಬೈಲ್‌ನಲ್ಲಿ ಅಶ್ಲೀಲ ಚಿತ್ರ ವೀಕ್ಷಿಸುತ್ತಿದ್ದರು’ ಎಂದು ಪ್ರಸಾರವಾಗಿರುವ ವರದಿಯ ಸತ್ಯಾಸತ್ಯತೆ ಪರಿಶೀಲಿಸಲು ಈ ಪ್ರಕರಣವನ್ನು ಸದನದ ನೀತಿ ನಿರೂಪಣಾ ಸಮಿತಿಗೆ ವರ್ಗಾಯಿಸಲಾಗಿದೆ.

ಶುಕ್ರವಾರ ಪ್ರಶ್ನೊತ್ತರ ಕಲಾಪದ ಅವಧಿಯಲ್ಲಿ ರಾಠೋಡ್‌ ಅವರು ಮೊಬೈಲ್‌ ಗ್ಯಾಲರಿಯನ್ನು ನೋಡುತ್ತಿದ್ದ ದೃಶ್ಯ ಸುದ್ದಿ ವಾಹಿನಿಗಳ ಕ್ಯಾಮೆರಾಗಳಲ್ಲಿ ಸೆರೆಯಾಗಿತ್ತು. ‘ಪ್ರಕಾಶ್‌ ರಾಠೋಡ್‌ ಅಶ್ಲೀಲ ಚಿತ್ರ ವೀಕ್ಷಿಸುತ್ತಿದ್ದರು’ ಎಂದು ವರದಿಯೂ ಆಗಿತ್ತು. ಅದನ್ನು ರಾಠೋಡ್‌ ಅಲ್ಲಗಳೆದಿದ್ದರು.

ಸೋಮವಾರ ಕಲಾಪ ಆರಂಭವಾಗುತ್ತಿದ್ದಂತೆಯೇ ಈ ವಿಷಯ ಪ್ರಸ್ತಾಪಿಸಿದ ಸಭಾಪತಿ ಕೆ. ಪ್ರತಾಪಚಂದ್ರ ಶೆಟ್ಟಿ, ‘ಶುಕ್ರವಾರ ಸದಸ್ಯರೊಬ್ಬರು ಮೊಬೈಲ್‌ನಲ್ಲಿ ಆಕ್ಷೇಪಾರ್ಹ ವಿಡಿಯೊ ನೋಡುತ್ತಿದ್ದರು ಎಂದು ಮಾಧ್ಯಮಗಳಲ್ಲಿ ವರದಿಯಾಗಿದೆ. ಈ ಕುರಿತು ಸತ್ಯಾಸತ್ಯತೆಯನ್ನು ಪರಿಶೀಲಿಸಬೇಕಿದೆ. ಅದಕ್ಕಾಗಿ ಪ್ರಕರಣವನ್ನು ಸದನದ ನೀತಿ ನಿರೂಪಣಾ ಸಮಿತಿಗೆ ವರ್ಗಾಯಿಸಿದ್ದೇನೆ’ ಎಂದು ಪ್ರಕಟಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.