ಮಂಗಳವಾರ, ಮೇ 18, 2021
23 °C

ರೇವ್ ಪಾರ್ಟಿ: ಮಹಿಳಾ ಪೊಲೀಸ್ ಕಾನ್‌ಸ್ಟೆಬಲ್‌, ಪುತ್ರ ಭಾಗಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಆಲೂರು (ಹಾಸನ ಜಿಲ್ಲೆ): ನಂದಿಪುರ ಎಸ್ಟೇಟ್‍ನಲ್ಲಿ ನಡೆದ ರೇವ್ ಪಾರ್ಟಿ ಪ್ರಕರಣದಲ್ಲಿ, ಮಂಗಳೂರು ಪೊಲೀಸ್ ಠಾಣೆಯ ಮಹಿಳಾ ಪೊಲೀಸ್ ಕಾನ್‌ಸ್ಟೆಬಲ್ ಮತ್ತು ಅವರ ಪುತ್ರ ಭಾಗಿಯಾಗಿರುವುದು ಬೆಳಕಿಗೆ ಬಂದಿದೆ.

ಮಂಗಳೂರು ಸೈಬರ್ ಪೊಲೀಸ್ ಠಾಣೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಮಹಿಳಾ ಪೊಲೀಸ್ ಕಾನ್‌ಸ್ಟೆಬಲ್ ಶ್ರೀಲತಾ ಹಾಗೂ ಅವರ ಮಗ ಅತುಲ್, ಈ ಪಾರ್ಟಿ ಆಯೋಜಿಸಿದ್ದರು ಎಂಬ ವಿಚಾರ ತನಿಖೆಯಿಂದ ಗೊತ್ತಾಗಿದೆ.

‘ಪೊಲೀಸರು ದಾಳಿ ನಡೆಸಿದ ವೇಳೆ, ಶ್ರೀಲತಾ ಸಹ ಸಿಕ್ಕಿ ಬಿದ್ದಿದ್ದರು. ಇವರ ರಕ್ತದ ಮಾದರಿ ಸಂಗ್ರಹಿಸಿ, ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿದೆ. ಪ್ರಮುಖ ಆರೋಪಿ ಅತುಲ್ ತಲೆಮರೆಸಿಕೊಂಡಿದ್ದಾನೆ. ಎರಡು ದಿನಗಳಲ್ಲಿ ಇಬ್ಬರನ್ನೂ ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಲಾಗುವುದು. ಪೊಲೀಸ್‌ ವಶದಲ್ಲಿದ್ದ ಎಸ್ಟೇಟ್ ಮಾಲೀಕ ಗಗನ್, ಬೆಂಗಳೂರಿನ ಮುರುಗೇಶ್‍ಪಾಳ್ಯ ನಿವಾಸಿ ಸೋನಿ, ಬನ್ನೇರುಘಟ್ಟ ನಿವಾಸಿ ಪಂಕಜ್ ಅವರ ಬಳಿ ಗಾಂಜಾ ಹಾಗೂ ಇತರ ಮಾದಕ ವಸ್ತುಗಳು ಪತ್ತೆಯಾದ ಕಾರಣ, ಇವರನ್ನು ಮತ್ತೆ ನ್ಯಾಯಾಲಯಕ್ಕೆ ಹಾಜರುಪಡಿಸಿ ಹೆಚ್ಚಿನ ತನಿಖೆಗಾಗಿ ಪೊಲೀಸ್ ವಶಕ್ಕೆ ಪಡೆಯಲಾಗಿದೆ’ ಎಂದು ಡಿವೈಎಸ್ಪಿ ಬಿ.ಆರ್‌. ಗೋಪಿ ತಿಳಿಸಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.