ಶುಕ್ರವಾರ, ಮೇ 27, 2022
21 °C

ವಜಾಗೊಂಡಿದ್ದ ಸಾರಿಗೆ ನೌಕರರ ಮರು ನೇಮಕ: ಶ್ರೀರಾಮುಲು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಮುಷ್ಕರದಲ್ಲಿ ಭಾಗಿಯಾದ ಕಾರಣಕ್ಕೆ ಸಾರಿಗೆ ಸಂಸ್ಥೆಗಳ ನೌಕರರು ವಜಾಗೊಂಡ ಪ್ರಕರಣಗಳನ್ನು ಲೋಕ್ ಅದಾಲತ್‌ ಮೂಲಕ ನಾಲ್ಕು ವಾರಗಳಲ್ಲಿ ಇತ್ಯರ್ಥಪಡಿಸಿ, ಅವರ ಪುನರ್ ನೇಮಕಕ್ಕೆ ನಿಯಮಾನುಸಾರ ಕ್ರಮ ಕೈಗೊಳ್ಳುವಂತೆ ನಾಲ್ಕೂ ಸಾರಿಗೆ ನಿಗಮಗಳಿಗೆ ಸರ್ಕಾರ ನಿರ್ದೇಶನ ನೀಡಿದೆ.

ಆರನೇ ವೇತನ ಆಯೋಗದ ಶಿಫಾರಸುಗಳನ್ನು ಸಾರಿಗೆ ನೌಕರರಿಗೂ ಅನ್ವಯಿಸಬೇಕು ಎಂದು ಒತ್ತಾಯಿಸಿ 2021ರ ಏಪ್ರಿಲ್ 7ರಿಂದ 21ರವರೆಗೆ ನೌಕರರು ಮುಷ್ಕರ ನಡೆಸಿದ್ದರು. ಕರ್ತವ್ಯಕ್ಕೆ ಗೈರಾಗಿ ಮುಷ್ಕರದಲ್ಲಿ ಭಾಗಿಯಾಗಿದ್ದ ನೌಕರರನ್ನು ವಜಾಗೊಳಿಸಲಾಗಿತ್ತು. ಅವರಲ್ಲಿ ‌1,351 ನೌಕರರ ಮರು ನೇಮಕ ವಿಷಯ ಇತ್ಯರ್ಥಪಡಿಸುವಂತೆ ನಿಗಮಗಳ ವ್ಯವಸ್ಥಾಪಕ ನಿರ್ದೇಶಕರಿಗೆ ಸಾರಿಗೆ ಇಲಾಖೆ ಸೂಚನೆ ನೀಡಿದೆ.

*
ಸಾರಿಗೆ ಸಿಬ್ಬಂದಿಯನ್ನು ಎಂಟು ತಿಂಗಳ ಹಿಂದೆ ವಜಾಗೊಳಿಸಲಾಗಿತ್ತು. ಈಗ ಅವರನ್ನು ಮಾನವೀಯತೆ ದೃಷ್ಟಿಯಿಂದ ಸೇವೆಗೆ ತೆಗೆದುಕೊಳ್ಳಲು ತೀರ್ಮಾನಿಸಲಾಗಿದೆ.
–ಶ್ರೀರಾಮುಲು, ಸಾರಿಗೆ ಸಚಿವ

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು