ಶನಿವಾರ, 4 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಭ್ರಷ್ಟಾಚಾರವಾಗಿದ್ದರೆ ಯಾವುದೇ ತನಿಖೆಗೂ ಸಿದ್ಧ- ಕೋಟ ಶ್ರೀನಿವಾಸ ಪೂಜಾರಿ

Last Updated 18 ಏಪ್ರಿಲ್ 2022, 5:32 IST
ಅಕ್ಷರ ಗಾತ್ರ

ಹೊಸಪೇಟೆ (ವಿಜಯನಗರ): ‘ನನ್ನ ಇಲಾಖೆಯಲ್ಲಿ ಭ್ರಷ್ಟಾಚಾರವಾಗಿದ್ದರೆ ಯಾವುದೇ ತನಿಖೆಗೂ ಸಿದ್ಧ’ ಎಂದು ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದರು.

ಶಾಸಕ ಪ್ರಿಯಾಂಕ್‌ ಖರ್ಗೆ ಅವರು ಇತ್ತೀಚೆಗೆ ನನ್ನ ಇಲಾಖೆಯ ಬಗ್ಗೆ ಮೆಚ್ಚುಗೆಯ ಮಾತುಗಳನ್ನು ಆಡಿದ್ದರು. ಆದರೆ, ಅನಂತರ ಆರೋಪಗಳನ್ನು ಮಾಡಿ ಟೀಕಿಸಿದ್ದಾರೆ. ಆರೋಪ, ಟೀಕೆ ಮಾಡುವುದು ಪ್ರಜಾಪ್ರಭುತ್ವದಲ್ಲಿ ಎಲ್ಲರಿಗೂ ಅವಕಾಶವಿದೆ. ಆದರೆ, ಸತ್ಯಕ್ಕೆ ಅಪಚಾರವಾಗುವ ರೀತಿಯಲ್ಲಿ ಆರೋಪ ಮಾಡಬಾರದು’ ಎಂದು ಭಾನುವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಹೇಳಿದರು.

‘ಕೊಳವೆಬಾವಿ ಟೆಂಡರ್‌ ಸಂಪೂರ್ಣ ಪಾರದರ್ಶಕವಾಗಿ ನಡೆದಿದೆ. ಗುಣಮಟ್ಟದಲ್ಲಿ ಲೋಪದೋಷ ಕಂಡರೆ ಅನುದಾನ ಬಿಡುಗಡೆಗೊಳಿಸಿಲ್ಲ. ರೈತರ ಖಾತೆಗೆ ನೇರವಾಗಿ ಹಣ ಜಮೆ ಮಾಡಲಾಗುತ್ತಿದೆ. ಅಧಿಕಾರಿಗಳು ಸೇರಿದಂತೆ ಯಾರಿಂದಾದರೂ ಭ್ರಷ್ಟಾಚಾರವಾಗಿದ್ದರೆ ಯಾವುದೇ ತನಿಖೆಗೂ ಸಿದ್ಧ. ತಪ್ಪಿತಸ್ಥರನ್ನು ರಕ್ಷಿಸುವ ಪ್ರಶ್ನೆಯೇ ಇಲ್ಲ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT