ಶನಿವಾರ, ಸೆಪ್ಟೆಂಬರ್ 18, 2021
24 °C

ಸವಾಲುಗಳನ್ನು ಮೆಟ್ಟಿಲುಗಳಾಗಿ ಮಾಡಿಕೊಂಡು ಎದುರಿಸುತ್ತೇನೆ: ಸಿಎಂ ಬೊಮ್ಮಾಯಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ‘ಸವಾಲುಗಳು ನನ್ನ ಮುಂದಿವೆ ನಿಜ. ಆರ್ಥಿಕ, ಸಾಮಾಜಿಕ ಸವಾಲುಗಳಿವೆ. ಎಲ್ಲ ಸಹೋದ್ಯೋಗಿಗಳ, ಪಕ್ಷದ ಹಿರಿಯ ಸಹಕಾರದಿಂದ ಸವಾಲುಗಳನ್ನು ಮೆಟ್ಟಿಲುಗಳಾಗಿ ಮಾಡಿ ಎದುರಿಸುವ ಆತ್ಮ ವಿಶ್ವಾಸವಿದೆ’ ಎಂದು ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು

ಮುಖ್ಯಮಂತ್ರಿಯಾಗಿ ‍ಪ್ರಮಾಣ ವಚನ ಸ್ವೀಕರಿಸಿದ ಬಳಿಕ ರಾಜಭವನದ ಬಳಿ ಮಾತನಾಡಿದ ಅವರು ‘ದಕ್ಷ , ಪ್ರಾಮಾಣಿಕ, ಜನಪರ ಆಡಳಿತವನ್ನು ನಮ್ಮ ಸರ್ಕಾರ ಕೊಡುತ್ತದೆ. ಬಡವರ, ದೀನ ದಲಿತರ, ಹಿಂದುಳಿದ ವರ್ಗದವರ ಕಣ್ಣೀರು ಒರೆಸುವ ಕೆಲಸವನ್ನು ಸರ್ಕಾರ ಮಾಡಲಿದೆ.  ಪ್ರಾದೇಶಿಕ ಸಮತೋಲನವನ್ನು ನೀಗಿಸಲು ಪ್ರಯತ್ನಿಸುತ್ತೇನೆ’ ಎಂದರು.

‘ಎಲ್ಲರನ್ನೂ ಒಗ್ಗೂಡಿಸಿ ತೆಗೆದುಕೊಂಡು ಹೋಗುತ್ತೇನೆ. ನಾನು ಮುಖ್ಯಮಂತ್ರಿ ಎನ್ನುವುದಕ್ಕಿಂತಲೂ ತಂಡವಾಗಿ ಸರ್ಕಾರ ಕೆಲಸ ಮಾಡಲಿದೆ. ಎಲ್ಲ ಸವಾಲುಗಳನ್ನು ಒಟ್ಟಾಗಿ ಎದುರಿಸುತ್ತೇನೆ’ ಎಂದೂ ಹೇಳಿದರು.

ಇದನ್ನೂ ಓದಿ.. ನೂತನ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ಪ್ರಮಾಣವಚನ
 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು