ಬುಧವಾರ, ಅಕ್ಟೋಬರ್ 21, 2020
22 °C

ನೆರೆ ರಾಜ್ಯಗಳಿಗೆ ಬಸ್ ಸಂಚಾರ ಆರಂಭಿಸಲು ಸಿದ್ಧತೆ: ಲಕ್ಷ್ಮಣ ಸವದಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ‘ಗೋವಾ, ಕೇರಳ, ತಮಿಳುನಾಡು, ಪಾಂಡಿಚೇರಿ, ತೆಲಂಗಾಣ ರಾಜ್ಯಗಳಿಗೆ ಬಸ್ ಸಂಚಾರ ಪುನರ್ ಆರಂಭಿಸಲು ಸಿದ್ಧತೆ ನಡೆಸಲಾಗಿದೆ’ ಎಂದು ಸಾರಿಗೆ ಸಚಿವ ಲಕ್ಷ್ಮಣ ಸವದಿ ತಿಳಿಸಿದ್ದಾರೆ.

‘ಈಗಾಗಲೇ ಆಂಧ್ರ ಪ್ರದೇಶಕ್ಕೆ ಸಾರಿಗೆ ಸಂಸ್ಥೆ ಬಸ್‍ಗಳು ಕಾರ್ಯಾಚರಣೆ ಮಾಡುತ್ತಿವೆ. ಉಳಿದ ರಾಜ್ಯಗಳಿಗೆ ಬಸ್ ಸಂಚಾರ ಆರಂಭಿಸಲು ಅಲ್ಲಿನ ಸರ್ಕಾರಗಳ ಅನುಮತಿ ದೊರೆಯಬೇಕು, ಸಾಧ್ಯತೆಗಳನ್ನು ಪರಿಶೀಲಿಸುವಂತೆ ಕೋರಿ ಪತ್ರ ಬರೆಯಲಾಗಿದೆ. ಶೀಘ್ರವೇ ಸಕಾರಾತ್ಮಕ ಪ್ರತಿಕ್ರಿಯೆ ದೊರೆಯುವ ನಿರೀಕ್ಷೆ ಇದೆ’ ಎಂದು ಹೇಳಿದ್ದಾರೆ.

‘ಲಾಕ್‍ಡೌನ್‌ಗೂ ಮುನ್ನ ರಾಜ್ಯದ ನಾಲ್ಕೂ ಸಾರಿಗೆ ಸಂಸ್ಥೆಗಳ 2,500 ಬಸ್‍ಗಳು ನೆರೆಯ ರಾಜ್ಯಗಳಿಗೆ ಸಂಚರಿಸುತ್ತಿದ್ದವು. ಅದೇ ರೀತಿ ಸಾರಿಗೆ ವ್ಯವಸ್ಥೆ ಕಲ್ಪಿಸಲು ಕ್ರಮ ಕೈಗೊಳ್ಳಲಾಗಿದೆ’ ಎಂದು ತಿಳಿಸಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು