ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಹಿಳೆಯರ ಮದುವೆ ವಯೋಮಿತಿ ಹೆಚ್ಚಿಸಲು ಕೇಂದ್ರಕ್ಕೆ ಶಿಫಾರಸು: ಶ್ಯಾಮಲ್ ಎಸ್.ಕುಂದರ್

Last Updated 22 ಜುಲೈ 2021, 16:08 IST
ಅಕ್ಷರ ಗಾತ್ರ

ರಾಯಚೂರು: ‘ಮಹಿಳೆಯರ ಮದುವೆಯ ವಯೋಮಿತಿಯನ್ನು 18ರಿಂದ 21 ವರ್ಷಕ್ಕೆ ಹೆಚ್ಚಿಸುವಂತೆ ರಾಷ್ಟ್ರೀಯ ಮಹಿಳಾ ಆಯೋಗವು ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಿದೆ’ ಎಂದುಆಯೋಗದ ಸದಸ್ಯೆ ಶ್ಯಾಮಲ್ ಎಸ್.ಕುಂದರ್ ಹೇಳಿದರು.

ಗುರುವಾರ ಇಲ್ಲಿ ನಡೆದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ‘ಶಿಫಾರಸು ಜಾರಿಗೊಳಿಸುವ ಬಗ್ಗೆ ಕೇಂದ್ರ ಸರ್ಕಾರ ಭರವಸೆ ನೀಡಿದೆ’ ಎಂದರು.

‘ದೇಶದಲ್ಲಿ ಬಾಲ್ಯವಿವಾಹ ಹೆಚ್ಚಾಗಿ ನಡೆಯುತ್ತಿವೆ. ಬಾಲ್ಯ ವಿವಾಹದಿಂದಾಗಿ ಕೌಟುಂಬಿಕ ಸಮಸ್ಯೆ ಹಾಗೂ ವರದಕ್ಷಿಣೆ ಕಿರುಕುಳ ಪ್ರಕರಣ ಹೆಚ್ಚುತ್ತಿವೆ. ಈ ಬಗ್ಗೆಯೂ ಸಮೀಕ್ಷೆ ನಡೆಸಿ ಸರ್ಕಾರಕ್ಕೆ ವರದಿ ನೀಡಲಾಗಿದೆ’ ಎಂದರು.

‘ಮಹಿಳೆಯರ ಮೇಲೆ ನಡೆಯುತ್ತಿರುವ ದೌರ್ಜನ್ಯ ಪ್ರಕರಣಗಳ ಬಗ್ಗೆ ಗ್ರಾಮ ಮಟ್ಟದಲ್ಲಿ ಮಾಹಿತಿ ಸಂಗ್ರಹಿಸಲು ಸಖಿ ಕೇಂದ್ರ ಆರಂಭಿಸಿದೆ. ಅದರ ಮೂಲಕ ಗ್ರಾಮೀಣ ಮಹಿಳೆಯರ ಸಮಸ್ಯೆಯನ್ನು ಜಿಲ್ಲಾಡಳಿತದ ಗಮನಕ್ಕೆ ತಂದು ಸಮಸ್ಯೆ ಪರಿಹಾರಕ್ಕೆ ಕ್ರಮ ಕೈಗೊಳ್ಳಬೇಕು’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT