ಪ್ರಜಾಪ್ರಭುತ್ವ ವ್ಯವಸ್ಥೆಯನ್ನೇ ಬುಡಮೇಲು ಮಾಡುವಂಥ ʼಆಪರೇಷನ್ ಕಮಲʼದಂಥ ʼಅನೈತಿಕʼ, ʼನಿರ್ಲಜ್ಜʼ, ʼನೀಚʼ ರಾಜಕಾರಣವನ್ನು RSS ಶಾಖೆಯಲ್ಲೇ ಕಲಿಸಲಾಯಿತಾ ಎಂಬುದನ್ನೂ ನೀವು ಜನರಿಗೆ ಹೇಳಬೇಕು ಸಿ.ಟಿ.ರವಿಯವರೇ? 4/8
— H D Kumaraswamy (@hd_kumaraswamy) October 6, 2021
ಜನರು ಕಣ್ಣೀರಿನಲ್ಲಿ ಕೈತೊಳೆಯುತ್ತಿದಾರೆ. ಇವತ್ತಿನ ಪ್ರಜಾವಾಣಿ ಪತ್ರಿಕೆ ಓದಿ. ಅದರಲ್ಲಿ “ಬದುಕು ಸಾಕೆನಿದೆ-ಭಗವಂತನಿಗೂ ಕರುಣೆ ಇಲ್ಲ” ಎನ್ನುವ ವರದಿ ಇದೆ. ಬೆಂಗಳೂರಿನ ಶ್ರೀನಿವಾಸನಗರದ ಬಿ.ಆರ್.ವಾಸುದೇವ ಎಂಬ ಬೀದಿ ಬದಿ ವ್ಯಾಪಾರಿ ಹೇಳಿರುವ ಮಾತುಗಳನ್ನು ಒಮ್ಮೆ ಓದಿ. ಆಗಲಾದರೂ ನಿಮ್ಮ ಕಲ್ಲು ಹೃದಯ ಕರಗಬಹುದು. 5/8
— H D Kumaraswamy (@hd_kumaraswamy) October 6, 2021
@CTRavi_BJP ಅವರೇ, ಮನೆಯಲ್ಲಿ ಕೂತು ಪುಸ್ತಕ ಓದಿದರೆ ಸಾಲದು ಎಂದಿದ್ದೀರಿ. RSS ಬಗ್ಗೆ ಜ್ಞಾನಾರ್ಜನೆ, ಅಧ್ಯಯನ, ಸಂಶೋಧನೆ ಮಾಡಲು ಸಂಘದ ಶಾಖೆಗೆ ಬನ್ನಿ ಎಂದು ನನಗೆ ಆಹ್ವಾನ ಕೊಟ್ಟಿದ್ದೀರಿ.1/8
— H D Kumaraswamy (@hd_kumaraswamy) October 6, 2021
ಜನ ಪ್ರತಿನಿಧಿಗಳನ್ನು, ಸರಕಾರಗಳನ್ನು, ಆಡಳಿತ ಯಂತ್ರಾಂಗವನ್ನು ಕಪಿಮುಷ್ಠಿಯಲ್ಲಿ ಇಟ್ಟುಕೊಳ್ಳುವ ಪರಿಪಾಠ ದೇಶಕ್ಕೆ ಒಳ್ಳೆಯದಲ್ಲ. ಅರ್ಥ ಮಾಡಿಕೊಳ್ಳಿ ಸಿ.ಟಿರವಿಯರೇ. ನಾನು ಸತ್ಯದ ಪರ. 8/8
— H D Kumaraswamy (@hd_kumaraswamy) October 6, 2021
ಶಿವಮೊಗ್ಗದಲ್ಲಿ 2,000 ರೂ. ಪರಿಹಾರ ಪಡೆಯಲು 100 ರೂ. ಲಂಚ ಕೇಳಿದ ವರದಿಗಳು ಬಂದಿವೆ. ಇದಾ ನಿಮ್ಮ ಸಮಾಜ ಸೇವೆ? ಛಿದ್ರವಾದ ಬದುಕುಗಳನ್ನೊಮ್ಮೆ ನೋಡಿ. ಜನರ ಬವಣೆಗಳ ಬಗ್ಗೆ RSS ಶಾಖೆಗಳಲ್ಲಿ ನಿಮಗೆಲ್ಲರಿಗೂ ಏನನ್ನೂ ಹೇಳಿಕೊಡುವುದಿಲ್ಲವಾ ಸಿ.ಟಿ.ರವಿಯವರೇ? 6/8
— H D Kumaraswamy (@hd_kumaraswamy) October 6, 2021
ಸೇವೆಯ ಸೋಗಿನಲ್ಲಿ ಸಂಸ್ಥೆಗಳು ರಾಜಕೀಯ ಮಾಡಬಾರದು. ಜನರ ಬವಣೆಗಳ ನಿವಾರಣೆ ನಿಟ್ಟಿನಲ್ಲಿ ದುಡಿಯಬೇಕೆ ಹೊರತು ಬದುಕಿಗೇ ಬೆಂಕಿ ಇಡಬಾರದು. ಸಮಾಜದ ಶಾಂತಿಯನ್ನು ಕಾಪಾಡಬೇಕೇ ಹೊರತು, ಅದಕ್ಕೆ ಕೊಳ್ಳಿ ಇಡಬಾರದು. RSS ಹುಟ್ಟಿದಾಗಿನಿಂದಲೂ ಏನೆಲ್ಲ ಮಾಡಿಕೊಂಡು ಬಂದಿದೆ ಎನ್ನುವುದು ಜಗತ್ತಿಗೇ ಗೊತ್ತಿರುವ ಸಂಗತಿ. 7/8
— H D Kumaraswamy (@hd_kumaraswamy) October 6, 2021
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.