ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪ್ರಾದೇಶಿಕ ಕೌಶಲ ಸ್ಪರ್ಧೆ: ರಾಜ್ಯಕ್ಕೆ 14 ಚಿನ್ನ, 13 ಬೆಳ್ಳಿ ಪದಕ

Last Updated 5 ಡಿಸೆಂಬರ್ 2021, 21:51 IST
ಅಕ್ಷರ ಗಾತ್ರ

ಬೆಂಗಳೂರು: ಆಂಧ್ರಪ್ರದೇಶದ ವಿಶಾಖಪಟ್ಟಣದಲ್ಲಿ ನಡೆದ ದಕ್ಷಿಣ ಭಾರತ ಮಟ್ಟದ ಪ್ರಾದೇಶಿಕ ಕೌಶಲ ಸ್ಪರ್ಧೆಯಲ್ಲಿ ಕರ್ನಾಟಕ ತಂಡ 14 ಚಿನ್ನ ಮತ್ತು 13 ಬೆಳ್ಳಿ ಪದಕಗಳ ಸಹಿತ ಒಟ್ಟು 27 ಪದಕಗಳನ್ನು ಮಡಿಲಿಗೆ ಹಾಕಿಕೊಂಡು ಪ್ರಥಮ ಸ್ಥಾನ ತನ್ನದಾಗಿಸಿಕೊಂಡಿದೆ.

ಕರ್ನಾಟಕವೂ ಸೇರಿದಂತೆ ಆಂಧ್ರಪ್ರದೇಶ, ತೆಲಂಗಾಣ, ಕೇರಳ, ತಮಿಳುನಾಡು, ಮಹಾರಾಷ್ಟ್ರ ಮತ್ತು ಒಡಿಶಾ ರಾಜ್ಯದ ತಂಡಗಳು ಈ ಪ್ರಾದೇಶಿಕ ಮಟ್ಟದ ಸುತ್ತಿನ ಸ್ಪರ್ಧೆಯಲ್ಲಿ ಪಾಲ್ಗೊಂಡಿದ್ದವು.

ಈ ಸ್ಪರ್ಧಿಗಳಲ್ಲಿ 17 ಅಭ್ಯರ್ಥಿಗಳಿಗೆ ಕರ್ನಾಟಕ ರಾಜ್ಯ ಕೌಶಲಾಭಿವೃದ್ಧಿ ನಿಗಮ ಮತ್ತು 10 ಸ್ಪರ್ಧಿಗಳಿಗೆ ಸರ್ಕಾರಿ ಉಪಕರಣ ಕಾರ್ಯಾಗಾರದ ವತಿಯಿಂದ ತರಬೇತಿ ನೀಡಲಾಗಿತ್ತು. ರಾಜ್ಯದಿಂದ ಈ ಸ್ಪರ್ಧೆಯಲ್ಲಿ ಒಟ್ಟು 69 ಸ್ಪರ್ಧಿಗಳು ಭಾಗವಹಿಸಿದ್ದು, 35 ಬಗೆಯ ಕೌಶಲಗಳಲ್ಲಿ ಪ್ರತಿಭೆಯನ್ನು ಪ್ರದರ್ಶಿಸಿದ್ದರು.

ರಾಜ್ಯದ ಸ್ಪರ್ಧಿಗಳು ಮೆಕಾಟ್ರಾನಿಕ್ಸ್, ಮುದ್ರಣ ತಂತ್ರಜ್ಞಾನ, ಆಭರಣ ತಯಾರಿಕೆ, ಕೈಗಾರಿಕಾ ನಿಯಂತ್ರಣ, ಕಾರ್ ಪೇಂಟಿಂಗ್, ಅಡುಗೆ ತಯಾರಿಕೆ, ಪ್ಲಾಸ್ಟಿಕ್ ಡೈ ಎಂಜಿನಿಯರಿಂಗ್, ಬೇಕರಿ ಪದಾರ್ಥಗಳ ತಯಾರಿಕೆ ಮತ್ತು ಕ್ಲೌಡ್ ಕಂಪ್ಯೂಟಿಂಗ್ ವಿಭಾಗಗಳಲ್ಲಿ ಚಿನ್ನದ ಪದಕ ಪಡೆದಿದ್ದಾರೆ.

ಉಳಿದಂತೆ ಎಂ-ಕ್ಯಾಡ್, ಕೇಶವಿನ್ಯಾಸ, ಗ್ರಾಫಿಕ್ ವಿನ್ಯಾಸ, ವಿಷುಯಲ್ ಮರ್ಕಂಡೈಸಿಂಗ್, 3ಡಿ ಡಿಜಿಟಲ್ ಗೇಮ್ ಆರ್ಟ್ ಮತ್ತು ವಾಟರ್ ಟೆಕ್ನಾಲಜಿ ಮತ್ತಿತರ ವಿಭಾಗಗಳಲ್ಲಿ ಬೆಳ್ಳಿ ಪದಕ ಮುಡಿಗೇರಿಸಿಕೊಂಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT