ಶನಿವಾರ, ಅಕ್ಟೋಬರ್ 24, 2020
18 °C

ಗುಲಬರ್ಗಾ ವಿಶ್ವವಿದ್ಯಾಲಯ: ಪೊಲೀಸ್ ರಕ್ಷಣೆ ಕೋರಿದ ಕುಲಸಚಿವ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕಲಬುರ್ಗಿ: ‘ಗುಲಬರ್ಗಾ ವಿಶ್ವವಿದ್ಯಾಲಯದಲ್ಲಿ ಕಾನೂನು ವ್ಯಾಪ್ತಿ ‌ಮೀರಿ ಕೆಲಸ ಮಾಡಲು ಕೆಲವರು ಒತ್ತಡ ಹೇರುತ್ತಿದ್ದಾರೆ‌. ಹೀಗಾಗಿ ವಿಶ್ವವಿದ್ಯಾಲಯದಲ್ಲಿ ಪ್ರಕ್ಷುಬ್ಧ ವಾತಾವರಣ ನಿರ್ಮಾಣವಾಗಿದೆ. ನನಗೆ ಪೊಲೀಸ್ ರಕ್ಷಣೆ ನೀಡಬೇಕು’ ಎಂದು ಗುಲಬರ್ಗಾ ವಿಶ್ವವಿದ್ಯಾಲಯದ ಕುಲಸಚಿವ ಪ್ರೊ.ಸಿ.ಸೋಮಶೇಖರ್ ಪೊಲೀಸರಿಗೆ ಮನವಿ ಸಲ್ಲಿಸಿದ್ದಾರೆ.

ಪೊಲೀಸ್ ಕಮಿಷನರ್ ಸತೀಶ ಕುಮಾರ್ ಎನ್. ಅವರನ್ನು ಇತ್ತೀಚೆಗೆ ಖುದ್ದು ‌ಭೇಟಿ ಮಾಡಿದ ಅವರು, ‘ಸಿಬ್ಬಂದಿ ನೇಮಕಾತಿ, ಶಿಕ್ಷಕೇತರ ಸಿಬ್ಬಂದಿಯ ಆಂತರಿಕ ವರ್ಗಾವಣೆಗೆ ಸಂಬಂಧಿಸಿದಂತೆ ಒತ್ತಡ ಹೇರ ಲಾಗುತ್ತಿದೆ. ವಿಶ್ವವಿದ್ಯಾಲಯಕ್ಕೆ ಸಂಬಂಧಪಡದ ವ್ಯಕ್ತಿಗಳು ಬಂದು ದೈನಂದಿನ ಆಡಳಿ ತಾತ್ಮಕ ಕೆಲಸಕ್ಕೆ ಅಡ್ಡಿಪಡಿಸುತ್ತಿದ್ದಾರೆ. ಇದರಿಂದ ನನಗೆ ಸಮರ್ಪಕವಾಗಿ ಕೆಲಸ ಮಾಡಲು ಆಗುತ್ತಿಲ್ಲ. ಒಟ್ಟಾರೆ ಬೆಳವಣಿಗೆ ಗಳಿಂದ ನನಗೆ ಜೀವ ಭಯವಿದೆ. ತುರ್ತಾಗಿ ರಕ್ಷಣೆ ನೀಡಬೇಕು’ ಎಂದು ಅವರು ಕೋರಿದ್ದಾರೆ.

ಆದರೆ, ಯಾವುದೇ ವ್ಯಕ್ತಿಯ ವಿರುದ್ಧ ಕುಲಸಚಿವರು ನಿರ್ದಿಷ್ಟ ಆರೋಪ ಮಾಡಿಲ್ಲ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು