ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಚಿವ ಸುಧಾಕರ್ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಿ ಸಮನ್ಸ್ ನೀಡಿದ ನ್ಯಾಯಾಲಯ

Last Updated 24 ನವೆಂಬರ್ 2022, 7:23 IST
ಅಕ್ಷರ ಗಾತ್ರ

ಚಿಕ್ಕಬಳ್ಳಾಪುರ: ಶಾಶ್ವತ ನೀರಾವರಿ ಹೋರಾಟ ಸಮಿತಿ ಅಧ್ಯಕ್ಷ ಆರ್.ಆಂಜನೇಯ ರೆಡ್ಡಿ ಅವರು ದಾಖಲಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ವಿರುದ್ಧ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಕ್ರಿಮಿನಲ್ ಪ್ರಕರಣ ದಾಖಲಿಸಲು ಆದೇಶಿಸಿದೆ. ಸಚಿವರಿಗೆ ಸಮನ್ಸ್ ನೀಡಿದೆ.

ಕಾಂಗ್ರೆಸ್ ಮತ್ತು ಜೆಡಿಎಸ್ ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷರಾಗಿ ಸುಧಾಕರ್ ಅವರನ್ನು ನೇಮಿಸಲಾಗಿತ್ತು. ಇವರ ಅರ್ಹತೆ ಮತ್ತು ಮಾನದಂಡ ಪ್ರಶ್ನಿಸಿ ಆಂಜನೇಯ ರೆಡ್ಡಿ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದರು.

ರೈತರಿಗೆ ಕಳ್ಳಬಟ್ಟಿ ಕುಡಿಸಿಜೈಲು ಸೇರಿದ್ದ ವ್ಯಕ್ತಿ ನನ್ನ ವಿರುದ್ಧ ಹೋರಾಟ ಮಾಡುತ್ತಿದ್ದಾರೆ ಎಂದು‌ ಅಂದು ಶಾಸಕರಾಗಿದ್ದ ಸುಧಾಕರ್ ಆರೋಪಿಸಿದ್ದರು. ಇದು ನಮ್ಮ ತೇಜೋವಧೆ ಎಂದು ಈ ಹೇಳಿಕೆ ವಿರುದ್ಧ ಆಂಜನೇಯ ರೆಡ್ಡಿ ನ್ಯಾಯಾಲಯದಲ್ಲಿ ಪ್ರಕರಣ ದಾಖಲಿಸಿದ್ದರು.

ಮಾನನಷ್ಟ ಪ್ರಕರಣವನ್ನು ಕ್ರಿಮಿನಲ್ ಪ್ರಕರಣ ಎಂದು ಪರಿಗಣಿಸಬಹುದು ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಈ ಆಧಾರದಲ್ಲಿ ಆಂಜನೇಯ ರೆಡ್ಡಿ, ಸುಧಾಕರ್ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT