ಬೆಂಗಳೂರು: ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಜಂಟಿ ನಿರ್ದೇಶಕರ ಹುದ್ದೆ ಗಳ ಕಾರ್ಯಸ್ಥಾನವನ್ನು ಬೆಂಗಳೂರು, ಕಲಬುರ್ಗಿ, ಬೆಳಗಾವಿ ಮತ್ತು ಮೈಸೂರು ಕಂದಾಯ ವಲಯಗಳಿಗೆ ಸ್ಥಳಾಂತರ ಮಾಡಿ ಆದೇಶ ಹೊರಡಿಸಲಾಗಿದೆ.
ಸಾರ್ವಜನಿಕರು ತಮ್ಮ ಕೆಲಸಗಳಿಗಾಗಿ ಕೇಂದ್ರ ಕಚೇರಿಗೆ ಬರುವ ಅನಿವಾರ್ಯತೆಯನ್ನು ತಪ್ಪಿಸಿ ಆಯಾ ವಲಯವಾರು ಜಂಟಿ ನಿರ್ದೇಶಕರ ಬಳಿಯೇ ತಮ್ಮ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಬಹುದು ಎಂಬ ಕಾರಣದಿಂದ ಬೆಂಗಳೂರು, ಕಲಬುರ್ಗಿ, ಬೆಳಗಾವಿ ಮತ್ತು ಮೈಸೂರು ವಲಯಗಳಲ್ಲಿ ವಲಯವಾರು ಜಂಟಿ ನಿರ್ದೇಶಕರನ್ನು ನೇಮಕ ಮಾಡುವುದು ಸೂಕ್ತ ಎಂಬ ಅಭಿಪ್ರಾಯ ಬಂದಿತ್ತು. ಈ ಕಾರಣದಿಂದ ಕ್ರಮ ತೆಗೆದುಕೊಂಡಿರುವುದಾಗಿ ಕನ್ನಡ ಮತ್ತು ಸಂಸ್ಕೃತಿ ಸಚಿವ ಸುನಿಲ್ ಕುಮಾರ್ ತಿಳಿಸಿದ್ದಾರೆ.
ಭಾರತ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಸಂಭ್ರಮಾಚರಣೆಗೆ ವ್ಯಾಪಕ ಸಿದ್ಧತೆ ಮಾಡಿಕೊಳ್ಳಬೇಕಾಗಿರುವ ಕಾರಣ ಸೆಪ್ಟೆಂಬರ್ ಒಳಗೆ ಎಲ್ಲಾ ಜಂಟಿ ನಿರ್ದೇಶಕರು ತಮಗೆ ಸೂಚಿಸಿದ ವಲಯ ಕಚೇರಿಗಳಲ್ಲಿ ಕರ್ತವ್ಯಕ್ಕೆ ಹಾಜರಾಗಬೇಕು ಮತ್ತು ನೂರು ದಿನಗಳ ಕಾರ್ಯ ಯೋಜನೆ ಸಿದ್ಧಪಡಿಸಬೇಕು ಎಂದು ಅವರು ಆದೇಶದಲ್ಲಿ ಸೂಚಿಸಿದ್ದಾರೆ.
ಎಲ್ಲೆಲ್ಲಿ ಯಾವ ಹುದ್ದೆಗಳು
lಕೇಂದ್ರ ಕಚೇರಿಯಲ್ಲಿದ್ದ (ಸುವರ್ಣ ಕರ್ನಾಟಕ) ಜಂಟಿ ನಿರ್ದೇಶಕರ ಹುದ್ದೆ ಮುಂದುವರೆಯುತ್ತದೆ (ಬೆಂಗಳೂರು)
lಧಾರವಾಡ ರಂಗಾಯಣದ ಆಡಳಿತಾಧಿಕಾರಿ ಹುದ್ದೆಯನ್ನು ಕೇಂದ್ರ ಕಚೇರಿ ಜಂಟಿ ನಿರ್ದೇಶಕರ ಹುದ್ದೆಗೆ ಸ್ಥಳಾಂತರಿಸಲಾಗಿದೆ (ಬೆಂಗಳೂರು)
lಜಂಟಿ ನಿರ್ದೇಶಕ (ಸಾಮಾನ್ಯ) ಹುದ್ದೆಯನ್ನು ಬೆಂಗಳೂರು ವಿಭಾಗ ಜಂಟಿ ನಿರ್ದೇಶಕರನ್ನಾಗಿ ಸ್ಥಳಾಂತರಿಸಲಾಗಿದೆ(ಬೆಂಗಳೂರು ವಿಭಾಗ)
lಕೇಂದ್ರ ಕಚೇರಿಯ ಜಂಟಿ ನಿರ್ದೇಶಕ (ಆಡಳಿತ) ಹುದ್ದೆಯನ್ನು ಮೈಸೂರು ವಿಭಾಗದ ಜಂಟಿ ನಿರ್ದೇಶಕರ ಹುದ್ದೆಗೆ ಸ್ಥಳಾಂತರಿಸಲಾಗಿದೆ(ಮೈಸೂರು ವಿಭಾಗ)
lಕೇಂದ್ರ ಕಚೇರಿಯ ಜಂಟಿ ನಿರ್ದೇಶಕ (ಕಾರ್ಯಕ್ರಮ) ಹುದ್ದೆಯನ್ನು ಕಲಬುರ್ಗಿ ವಲಯದ ಜಂಟಿ ನಿರ್ದೇಶಕರನ್ನಾಗಿ ವರ್ಗಾಯಿಸಲಾಗಿದೆ (ಕಲಬುರ್ಗಿ ವಿಭಾಗ)
lಶಿವಮೊಗ್ಗ ರಂಗಾಯಣದ ಜಂಟಿ ನಿರ್ದೇಶಕರ ಹುದ್ದೆಯನ್ನು ಬೆಳಗಾವಿ ವಿಭಾಗದ ಜಂಟಿ ನಿರ್ದೇಶಕರ ಹುದ್ದೆಗೆ ಸ್ಥಳಾಂತರಿಸಲಾಗಿದೆ(ಬೆಳಗಾವಿ ವಿಭಾಗ)
lರಿಜಿಸ್ಟ್ರಾರ್ ಸಂಗೀತ ನೃತ್ಯ ಅಕಾಡೆಮಿ ಹುದ್ದೆಯನ್ನು ಶಿವಮೊಗ್ಗ ರಂಗಾಯಣ ಆಡಳಿತಾಧಿಕಾರಿಯ ಹುದ್ದೆಗೆ ಸ್ಥಳಾಂತರಿಸಲಾಗಿದೆ (ಶಿವಮೊಗ್ಗ)
l ಕೇಂದ್ರ ಕಚೇರಿಯ ಸಹಾಯ ನಿರ್ದೇಶಕ(ಸುವರ್ಣ ಕರ್ನಾಟಕ) ಹುದ್ದೆಯನ್ನು ರಿಜಿಸ್ಟ್ರಾರ್ ಸಂಗೀತ ನೃತ್ಯ ಅಕಾಡೆಮಿಗೆ ಸ್ಥಳಾಂತರ( ರಿಜಿಸ್ಟ್ರಾರ್ ಸಂಗೀತ ನೃತ್ಯ ಅಕಾಡೆಮಿ)
lಧಾರವಾಡ ರಂಗಾಯಣ ಆಡಳಿತಾಧಿಕಾರಿ ಹುದ್ದೆಗೆ ರಿಜಿಸ್ಟ್ರಾರ್ ಕರ್ನಾಟಕ ಲಲಿತಕಲಾ ಅಕಾಡೆಮಿ ಹುದ್ದೆಯನ್ನು ಸ್ಥಳಾಂತರಿಸಲಾಗಿದೆ(ಧಾರವಾಡ ರಂಗಾಯಣ)
l ರಿಜಿಸ್ಟ್ರಾರ್ ಕರ್ನಾಟಕ ಲಲಿತಕಲಾ ಅಕಾಡೆಮಿ ಹುದ್ದೆಗೆ ಕೇಂದ್ರ ಕಚೇರಿಯ ಸಹಾಯಕ ನಿರ್ದೇಶಕರು (ಕಾರ್ಯಕ್ರಮ) ಹುದ್ದೆಯನ್ನು
ಸ್ಥಳಾಂತರಿಸಲಾಗಿದೆ (ಬೆಂಗಳೂರು)
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.