ಅಂಬೇಡ್ಕರ್ ಭಾವಚಿತ್ರ ತೆರವು ಆರೋಪ: ನ್ಯಾಯಾಧೀಶ ಮಲ್ಲಿಕಾರ್ಜುನ ಗೌಡ ವರ್ಗಾವಣೆ

ಬೆಂಗಳೂರು: ಗಣರಾಜ್ಯೋತ್ಸವ ಆಚರಣೆ ವೇಳೆ ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ್ ಭಾವಚಿತ್ರ ತೆರವು ಮಾಡಿಸಿದ ಆರೋಪಕ್ಕೆ ಗುರಿಯಾಗಿದ್ದ ನ್ಯಾಯಾಧೀಶ ಮಲ್ಲಿಕಾರ್ಜುನ ಗೌಡ ಅವರನ್ನು ವರ್ಗಾವಣೆ ಮಾಡಲಾಗಿದೆ.
‘ರಾಯಚೂರು ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ಪ್ರಧಾನ ನ್ಯಾಯಾಧೀಶ ಮಲ್ಲಿಕಾರ್ಜುನ ಗೌಡ ಅವರನ್ನು,
ಬೆಂಗಳೂರಿನಲ್ಲಿರುವ, ಕರ್ನಾಟಕ ರಾಜ್ಯ ಸಾರಿಗೆ ಮೇಲ್ಮನವಿ ನ್ಯಾಯಮಂಡಳಿ ಅಧ್ಯಕ್ಷರನ್ನಾಗಿ ವರ್ಗಾವಣೆ ಮಾಡಲಾಗಿದೆ’ ಎಂದು ಹೈಕೋರ್ಟ್ ರಿಜಿಸ್ಟ್ರಾರ್ ಜನರಲ್ ಶುಕ್ರವಾರ ಅಧಿಸೂಚನೆ ಹೊರಡಿಸಿ
ದ್ದಾರೆ. ‘ತಕ್ಷಣದಿಂದಲೇ ಈ ಆದೇಶ ಜಾರಿಗೆ ಬರಲಿದೆ’ ಎಂದು ತಿಳಿಸಲಾಗಿದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.