ಬೆಂಗಳೂರಿನ ಎನ್‌ಐಎ ಕಚೇರಿ ಮೇಲ್ದರ್ಜೆಗೇರಿಸಿ: ಶೋಭಾ ಕರಂದ್ಲಾಜೆ

ನವದೆಹಲಿ: ಬೆಂಗಳೂರಿನಲ್ಲಿ ರಾಷ್ಟ್ರೀಯ ತನಿಖಾ ತಂಡದ (ಎನ್‌ಐಎ) ಕಚೇರಿಯನ್ನು ಮೇಲ್ದರ್ಜೆಗೆ ಏರಿಸಿ ಅದರ ವ್ಯಾಪ್ತಿಯನ್ನು ಹಿಗ್ಗಿಸಬೇಕು ಎಂದು ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಒತ್ತಾಯಿಸಿದರು.
ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ನವದೆಹಲಿಯಲ್ಲಿ ಮಂಗಳವಾರ ಭೇಟಿ ಮಾಡಿ ಸಮಾ ಲೋಚನೆ ನಡೆಸಿದ ಅವರು, ‘ದಕ್ಷಿಣ ಕನ್ನಡದ ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದ ತನಿಖೆ ಯನ್ನು ತೀವ್ರಗೊಳಿಸಬೇಕು’ ಎಂದರು.
‘ಕರ್ನಾಟಕದಲ್ಲಿ ಇತ್ತೀಚಿನ ದಿನಗಳಲ್ಲಿ ಹಿಂದೂ ಯುವಕರ ಕೊಲೆ ಪ್ರಕರಣಗಳು ನಿರಂತರವಾಗಿ ನಡೆಯುತ್ತಿವೆ. ದಕ್ಷಿಣ ಕನ್ನಡ, ಬೆಂಗಳೂರು, ಮೈಸೂರು, ಶಿವಮೊಗ್ಲದಲ್ಲಿ ಹಿಂದೂ ಕಾರ್ಯಕರ್ತರನ್ನು ಒಂದೇ ಮಾದರಿಯಲ್ಲಿ ಕೊಲೆ ಮಾಡಲಾಗಿದೆ. ಕೇರಳ ಮಾದರಿಯಲ್ಲಿ ಕೊಲೆಗಳು ನಡೆಯುತ್ತಿವೆ. ಇದು ಕಳವಳಕಾರಿ’ ಎಂದು ಶೋಭಾ ಹೇಳಿದರು.
‘ಕೊಲೆ ಆರೋಪಿಗಳ ಹಿಂದೆ ಯಾರಿದ್ದಾರೆ, ಅವರಿಗೆ ಎಲ್ಲಿ ತರಬೇತಿ ನೀಡಲಾಗುತ್ತಿದೆ, ಈ ಕೃತ್ಯಗಳಿಗೆ ಹಣಕಾಸಿನ ನೆರವು ಎಲ್ಲಿಂದ ಸಿಗುತ್ತಿದೆ ಎಂಬುದನ್ನು ಪತ್ತೆ ಹಚ್ಚಿ ತೀವ್ರಗತಿಯಲ್ಲಿ ಕಾನೂನಾತ್ಮಕ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಸಚಿವರನ್ನು ಒತ್ತಾಯಿಸಲಾಗಿದೆ’ ಎಂದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.