ಬುಧವಾರ, ಜನವರಿ 20, 2021
29 °C

ಸರ್ಕಾರ ರಚನೆಗೆ 17 ಶಾಸಕರ ತ್ಯಾಗವೂ ಕಾರಣ: ಮಾತಿನ ವರಸೆ ಬದಲಿಸಿದ ರೇಣುಕಾಚಾರ್ಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಸರ್ಕಾರ ರಚನೆಯ ಕುರಿತು ತಮ್ಮ ಹೇಳಿಕೆ ವಿವಾದದ ಸ್ವರೂಪ ಪಡೆಯುವ ಸುಳಿವು ಸಿಗುತ್ತಿದ್ದಂತೆ ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಅವರು ಮಾತಿನ ವರಸೆ ಬದಲಿಸಿದ್ದಾರೆ.

ಸುದ್ದಿಗಾರರ ಜತೆ ಗುರುವಾರ ಮಾತನಾಡಿದ ಅವರು, ‘ಸರ್ಕಾರ ರಚನೆಗೆ ವಲಸೆ ಬಂದ 17 ಶಾಸಕರು ಕಾರಣರಲ್ಲ ಎಂದು ಎಲ್ಲೂ ಹೇಳಿಲ್ಲ. ಅವರು ಬಂದಿದ್ದರಿಂದಲೇ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಿದೆ. ಸರ್ಕಾರ ರಚನೆಯಲ್ಲಿ ಅವರ ತ್ಯಾಗವೂ ಇದೆ. ನಮ್ಮ ಕೊಡುಗೆಯೂ ಇದೆ’ ಎಂದು ಹೇಳಿದ್ದಾರೆ.

‘ಒಬ್ಬ ವ್ಯಕ್ತಿಯಿಂದ ಅಧಿಕಾರ ಬಂದಿಲ್ಲ ಎಂದು ಹೇಳಿದ್ದೇನೆಯೇ ಹೊರತು 17 ಜನರ ವಿಚಾರವನ್ನು ಎಲ್ಲೂ ಪ್ರಸ್ತಾಪಿಸಿಲ್ಲ’ ಎಂದು ಹೇಳುವ ಮೂಲಕ ವಿವಾದಕ್ಕೆ ತೆರೆ ಎಳೆದರು.

‘ಹದಿನೇಳು ಶಾಸಕರಿಂದಲೇ ಬಿಜೆಪಿ ಸರ್ಕಾರ ಬಂದಿದೆ ಎಂದು ಹೇಳುವುದು ಸರಿಯಲ್ಲ. 105 ಶಾಸಕರು ಇಲ್ಲದಿದ್ದರೆ ಸರ್ಕಾರ ರಚನೆ ಆಗುತ್ತಿತ್ತೇ? ಮೊದಲು 105 ಶಾಸಕರು ನಂತರ ಉಳಿದವರು’ ಎಂದು ರೇಣುಕಾಚಾರ್ಯ ಬುಧವಾರ ಹೇಳಿದ್ದರು.

ಯಾರಿಗೂ ಬ್ಲಾಕ್‌ಮೇಲ್‌ ಮಾಡಿಲ್ಲ: ‘ಸಂಪುಟ ವಿಸ್ತರಣೆಗೆ ಸಂಬಂಧಿಸಿದಂತೆ ಪಕ್ಷದ ವರಿಷ್ಠರು ಮತ್ತು ಮುಖ್ಯಮಂತ್ರಿಯವರು ತೀರ್ಮಾನ ಮಾಡುತ್ತಾರೆ. ಸಂಪುಟದಲ್ಲಿ ಸ್ಥಾನ ಪಡೆಯಲು ಯಾರಿಗೂ ನಾನು ಬ್ಲಾಕ್‌ಮೇಲ್‌ ಮಾಡಿಲ್ಲ ಎಂದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು