ಶುಕ್ರವಾರ, ಡಿಸೆಂಬರ್ 3, 2021
20 °C

ಉಪಚುನಾವಣೆಗೂ ಮುನ್ನವೇ 2ಎ ಮೀಸಲಾತಿ ವರದಿ ಪಡೆಯಿರಿ: ಜಯ ಮೃತ್ಯುಂಜಯ ಸ್ವಾಮೀಜಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಹಾನಗಲ್ ಮತ್ತು ಸಿಂದಗಿ ವಿಧಾನಸಭಾ ಉಪ ಚುನಾವಣೆಯ ಮತದಾನಕ್ಕೆ ಮುನ್ನವೇ ಲಿಂಗಾಯತ ಪಂಚಮಸಾಲಿಗೆ 2ಎ ಮೀಸಲಾತಿ ನೀಡುವ ಕುರಿತು ಹಿಂದುಳಿದ ವರ್ಗಗಳ ಆಯೋಗದಿಂದ ವರದಿ ತರಿಸಿಕೊಳ್ಳಬೇಕು ಎಂದು ಕೂಡಲಸಂಗಮ ಪೀಠದ ಬಸವ ಜಯ ಮೃತ್ಯುಂಜಯ ಸ್ವಾಮೀಜಿ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.

ಅಕ್ಟೋಬರ್ 30ರಂದು ಮತದಾನ ನಡೆಯಲಿದೆ. ಇದಕ್ಕೂ ಮುನ್ನವೇ ಸರ್ಕಾರ ಕ್ರಮ ಕೈಗೊಳ್ಳಬೇಕು. ಇದು ರಾಜಕೀಯ ಒತ್ತಡ ಅಲ್ಲ. ಸಮುದಾಯದ ಭಾವನೆಗಳನ್ನು ವ್ಯಕ್ತಪಡಿಸುತ್ತಿದ್ದೇವೆ ಎಂದು ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.

ಹಾನಗಲ್ ಕ್ಷೇತ್ರದಲ್ಲಿ ಸುಮಾರು 46 ಸಾವಿರ ಮತ್ತು ಸಿಂದಗಿಯಲ್ಲಿ ಸುಮಾರು 36 ಸಾವಿರ ಪಂಚಮಸಾಲಿ ಸಮುದಾಯದ ಮತದಾರರಿದ್ದಾರೆ. ಹಾನಗಲ್ ನಲ್ಲಿ ನಮ್ಮ ಸಮುದಾಯಕ್ಕೆ ಬಿಜೆಪಿ ಟಿಕೆಟ್ ನೀಡಿಲ್ಲ. ಮುಖ್ಯಮಂತ್ರಿ ಹುದ್ದೆ  ಸಹ ಸಮುದಾಯಕ್ಕೆ ನೀಡಿಲ್ಲ. ಹೀಗಾಗಿ ಸಮುದಾಯದಲ್ಲಿ ಅಸಮಾಧಾನವಾಗಿದೆ ಎಂದರು.

ಮೀಸಲಾತಿಗಾಗಿ ಹೋರಾಟ ಮುಂದುವರಿಯಲಿದ್ದು, ಈಗಾಗಲೇ ಅ.13ರಿಂದ ಪಂಚಮಸಾಲಿ ಪ್ರತಿಜ್ಞಾ ಪಂಚಾಯತ್ ಆರಂಭಿಸಲಾಗಿದೆ. 2022ರ ಜನವರಿ 14ರವರೆಗೆ ಈ ಅಭಿಯಾನ ನಡೆಯಲಿದೆ ಎಂದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು