ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಜ್ಯದಾದ್ಯಂತ ಗಣರಾಜ್ಯೋತ್ಸವ ಸಂಭ್ರಮ: ಜಿಲ್ಲಾ ಕೇಂದ್ರಗಳಲ್ಲಿ ಧ್ವಜಾರೋಹಣ

Last Updated 26 ಜನವರಿ 2021, 5:28 IST
ಅಕ್ಷರ ಗಾತ್ರ

ಬೆಂಗಳೂರು: ರಾಜ್ಯದಲ್ಲಿ 72ನೇ ಗಣರಾಜ್ಯೋತ್ಸವ ಸಂಭ್ರಮ ಮನೆ ಮಾಡಿದೆ. ಜಿಲ್ಲಾ ಕೇಂದ್ರಗಳಲ್ಲಿ ಉಸ್ತುವಾರಿ ಸಚಿವರು, ಶಾಸಕರು ಧ್ವಜಾರೋಹಣ ನೆರವೇರಿಸಿದ್ದಾರೆ.

ಚಿಕ್ಕಮಗಳೂರು ಜಿಲ್ಲೆಯಲ್ಲಿ ಅರಣ್ಯ ಸಚಿವ ಅರವಿಂದ ಲಿಂಬಾವಳಿ ಅವರು ಧ್ವಜಾರೋಹಣ ನೆರವೇರಿಸಿದರು.


ವಿಜಯಪುರ ಜಿಲ್ಲಾಡಳಿತವು ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವ ವಿದ್ಯಾಲಯದ ಆವರಣದಲ್ಲಿ ಏರ್ಪಡಿಸಿದ್ದ ಗಣರಾಜ್ಯೋತ್ಸವದಲ್ಲಿ ಜಿಲ್ಲಾ ಉಸ್ತುವಾರಿ ಸಚಿವೆ ಶಶಿಕಲಾ ಜೊಲ್ಲೆ ರಾಷ್ಟ್ರ ಧ್ವಜಾರೋಹಣ ನೆರವೇರಿಸಿದರು. ಶಾಸಕ ಬಸನಗೌಡ ಪಾಟೀಲ ಯತ್ನಾಳ, ಜಿಲ್ಲಾಧಿಕಾರಿ ಪಿ.ಸುನೀಲ್ ಕುಮಾರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅನುಪಮ್ ಅಗರವಾಲ್ ಇದ್ದಾರೆ.

ಚಿತ್ರದುರ್ಗದ ಪೊಲೀಸ್ ಕವಾಯತು ಮೈದಾನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಸಿ.ಶ್ರೀರಾಮುಲು ಧ್ವಜಾರೋಹಣ ನೆರವೇರಿಸಿದರು.

ಕಲಬುರ್ಗಿಯ ಡಿಎಆರ್ ಮೈದಾನದಲ್ಲಿ ಗಣರಾಜ್ಯೋತ್ಸವದ ಅಂಗವಾಗಿ ಆಹಾರ, ನಾಗರಿಕ ಪೂರೈಕೆ ಮತ್ತು ಗ್ರಾಹಕ ವ್ಯವಹಾರಗಳ ಸಚಿವ ಉಮೇಶ ಕತ್ತಿ ವಿವಿಧ ಪಡೆಗಳಿಂದ ಗೌರವ ಸ್ವೀಕರಿಸಿದರು. ಸಚಿವ ಉಮೇಶ ಕತ್ತಿ ಪಥಸಂಚಲನ ವೀಕ್ಷಿಸಿದರು. ಜಿಲ್ಲಾಧಿಕಾರಿ ವಿ.ವಿ. ಜ್ಯೋತ್ಸ್ನಾ, ಎಸ್ಪಿ ಡಾ. ಸಿಮಿ ಮರಿಯಮ್ ಜಾರ್ಜ್, ಜಿ.ಪಂ. ಸಿಇಓ ಡಾ. ರಾಜಾ ಪಿ. ಇದ್ದರು

ರಾಮನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾ‌ ಉಸ್ತುವಾರಿ ಸಚಿವ ಸಿ.ಎನ್. ಅಶ್ವತ್ಥನಾರಾಯಣ ಧ್ವಜಾರೋಹಣ ನೆರವೇರಿಸಿದರು. ಈ ಸಂದರ್ಭ ಪೊಲೀಸರು ಹಾಗೂ ಗೃಹ ರಕ್ಷಕ ತಂಡಗಳಿಂದ ಪಥ ಸಂಚಲನ ನಡೆಯಿತು. ಕೋವಿಡ್ ಹಿನ್ನೆಲೆಯಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳು‌ ಮೊಟಕುಗೊಂಡವು.

ಬೀದರ್: ಜಿಲ್ಲಾಡಳಿತದಿಂದ ಇಲ್ಲಿನ ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿ ಆಯೋಜಿಸಿರುವ ಗಣರಾಜ್ಯೋತ್ಸವ ಸಮಾರಂಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಧ್ವಜಾರೋಹಣ ನೆರವೇರಿಸಿದರು. ಶಾಸಕ ರಹೀಂ ಖಾನ್, ವಿಧಾನ ಪರಿಷತ್ ಸದಸ್ಯರಾದ ರಘುನಾಥರಾವ್ ಮಲ್ಕಾಪುರೆ, ವಿಜಯಸಿಂಗ್, ಅರಾವಿಂದಕುಮಾರ ಅರಳಿ, ಜಿಲ್ಲಾಧಿಕಾರಿ ರಾಮಚಂದ್ರನ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಾಗೇಶ ಡಿ.ಎಲ್, ಜಿಲ್ಲಾ ಪಂಚಾಯಿತಿ ಸಿಇಒ ಗ್ಯಾನೇಂದ್ರಕುಮಾರ ಗಂಗ್ವಾರ್ ಇದ್ದರು.

ರಾಯಚೂರು: ನಗರದ ಜಿಲ್ಲಾ ಪೊಲೀಸ್ ಮೈದಾನದಲ್ಲಿ ಏರ್ಪಡಿಸಿದ್ದ ಗಣರಾಜ್ಯೋತ್ಸವ ಸಮಾರಂಭದಲ್ಲಿ ಉಪಮುಖ್ಯಮಂತ್ರಿ ರಾಷ್ಟ್ರ ಧ್ವಜಾರೋಹಣ ನೆರವೇರಿಸಿದರು.

ಮೈಸೂರಿನ ಬನ್ನಿಮಂಟಪದ ಮೈದಾನದಲ್ಲಿ ಸಹಕಾರ ಹಾಗೂ ಜಿಲ್ಲಾ‌ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಧ್ವಜಾರೋಹಣ ನೆರವೇರಿಸಿದರು. ಈ ಸಂದರ್ಭ ಪೊಲೀಸರು ಹಾಗೂ ಗೃಹ ರಕ್ಷಕ ತಂಡಗಳಿಂದ ಪಥ ಸಂಚಲನ ನಡೆಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT