ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೀಸಲಾತಿ ಹೆಚ್ಚಳ: ಉಪಸಮಿತಿ ರಚನೆ

Last Updated 25 ನವೆಂಬರ್ 2020, 21:38 IST
ಅಕ್ಷರ ಗಾತ್ರ

ಬೆಂಗಳೂರು: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ನೀಡಿರುವ ಮೀಸಲಾತಿ ಪರಾಮರ್ಶೆ ನಡೆಸಲು ಸಮಾಜ ಕಲ್ಯಾಣ ಸಚಿವ ಬಿ.ಶ್ರೀರಾಮುಲು ಅಧ್ಯಕ್ಷತೆಯಲ್ಲಿ ಸಂಪುಟ ಉಪಸಮಿತಿ ರಚಿಸಲಾಗಿದೆ.

ಕಳೆದ ಸಂಪುಟ ಸಭೆಯಲ್ಲಿ ಈ ಸಂಬಂಧ ನಿರ್ಣಯ ತೆಗೆದುಕೊಳ್ಳಲಾಗಿತ್ತು. ಸಮಿತಿ ರಚನೆ ಅಧಿಕಾರವನ್ನು ಮುಖ್ಯಮಂತ್ರಿಯವರಿಗೆ ನೀಡಲಾಗಿತ್ತು. ಬುಧವಾರ ಈ ಸಂಬಂಧ ಆದೇಶ ಹೊರಡಿಸಲಾಗಿದೆ.

ಸಮಿತಿಯ ಉಳಿದ ಸದಸ್ಯರು– ಉಪಮುಖ್ಯಮಂತ್ರಿ ಗೋವಿಂದ ಎಂ.ಕಾರಜೋಳ, ಕಂದಾಯ ಸಚಿವ ಆರ್‌.ಅಶೋಕ, ಗೃಹ ಸಚಿವ ಬಸವರಾಜ ಬೊಮ್ಮಾಯಿ ಮತ್ತು ಕಾನೂನು ಸಚಿವ ಜೆ.ಸಿ.ಮಾಧುಸ್ವಾಮಿ.

ಆಯಾ ಜಾತಿಯ ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿ ಪ್ರಮಾಣವನ್ನು ಹೆಚ್ಚಿಸಬೇಕೆಂದು ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಬಹುದಿನಗಳಿಂದ ಹೋರಾಟ ನಡೆಸುತ್ತಿದ್ದಾರೆ. ಪರಿಶಿಷ್ಟ ಜಾತಿಯ ಮೀಸಲಾತಿ ಪ್ರಮಾಣವನ್ನು ಶೇ 15 ರಿಂದ 17 ಕ್ಕೂ, ಪರಿಶಿಷ್ಟ ಪಂಗಡದ ಮೀಸಲಾತಿಯನ್ನು ಶೇ 3 ರಿಂದ ಶೇ 7 ಕ್ಕೆ ಹೆಚ್ಚಿಸಲು ಬೇಡಿಕೆ ಮುಂದಿಟ್ಟಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT