ಸೋಮವಾರ, ಅಕ್ಟೋಬರ್ 18, 2021
22 °C

56 ಸ್ಥಳೀಯ ಸಂಸ್ಥೆಗಳಿಗೆ 2 ತಿಂಗಳಲ್ಲಿ ಮೀಸಲಾತಿ ಅಧಿಸೂಚನೆ ಹೊರಡಿಸಿ: ಹೈಕೋರ್ಟ್‌

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ರಾಜ್ಯದ 56 ನಗರ ಸ್ಥಳೀಯ ಸಂಸ್ಥೆಗಳಿಗೆ ಎರಡು ತಿಂಗಳಲ್ಲಿ ಮೀಸಲಾತಿ ಅಧಿಸೂಚನೆ ಹೊರಡಿಸುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ನಿರ್ದೇಶನ ನೀಡಿದೆ.

ಸ್ವಯಂ ಪ್ರೇರಿತ ಅರ್ಜಿ ದಾಖಲಿಸಿಕೊಂಡಿರುವ ಹಂಗಾಮಿ ಮುಖ್ಯ ನ್ಯಾಯಮೂರ್ತಿ ಸತೀಶ್ ಚಂದ್ರ ಶರ್ಮ ನೇತೃತ್ವದ ವಿಭಾಗೀಯ ಪೀಠ, ರಾಜ್ಯ ಚುನಾವಣಾ ಆಯೋಗ (ಎಸ್‌ಇಸಿ) ನೀಡಿದ ವಸ್ತುಸ್ಥಿತಿ ವರದಿ ಪರಿಶೀಲಿಸಿತು.

‘ಹಲವು ಸ್ಥಳೀಯ ಸಂಸ್ಥೆಗಳ ಅವಧಿ 2021ರ ಜೂನ್‌ನಲ್ಲೇ ಮುಕ್ತಾಯವಾಗಿದೆ. ಕಲಬುರ್ಗಿ, ಬೆಳಗಾವಿ, ಹುಬ್ಬಳ್ಳಿ– ಧಾರವಾಡ ಪಾಲಿಕೆಗಳಿಗೆ ಸೆ.6ರಂದು ಯಶಸ್ವಿಯಾಗಿ ಚುನಾವಣೆ ನಡೆಸಲಾಗಿದೆ. ಮೀಸಲಾತಿ ಪಟ್ಟಿ ಇಲ್ಲದೆ ಉಳಿದ ನಗರ ಸ್ಥಳೀಯ ಸಂಸ್ಥೆಗಳಿಗೆ ಚುನಾವಣಾ ಪ್ರಕ್ರಿಯೆ ಆರಂಭಿಸಲು ಆಗುತ್ತಿಲ್ಲ’ ಎಂದು ಆಯೋಗದ ಪರ ವಕೀಲ ಕೆ.ಎನ್. ಫಣೀಂದ್ರ ವಿವರಿಸಿದರು.

ಮೀಸಲಾತಿ ಪಟ್ಟಿಯನ್ನು ಕೂಡಲೇ ಪ್ರಕಟಿಸುವಂತೆ ಸರ್ಕಾರಕ್ಕೆ ಸೂಚಿಸಿದ ಪೀಠ, ನ.17ಕ್ಕೆ ವಿಚಾರಣೆ ಮುಂದೂಡಿತು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು