ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗುತ್ತಿಗೆ ನೇಮಕದಲ್ಲೂ ಮೀಸಲಾತಿಗೆ ಕ್ರಮ : ಬಸವರಾಜ ಬೊಮ್ಮಾಯಿ ಭರವಸೆ

Last Updated 16 ಫೆಬ್ರುವರಿ 2023, 20:39 IST
ಅಕ್ಷರ ಗಾತ್ರ

ಬೆಂಗಳೂರು: ಸರ್ಕಾರದ ವಿವಿಧ ಇಲಾಖೆಗಳಿಗೆ ಗುತ್ತಿಗೆ ಆಧಾರದ ನೇಮಕಾತಿಗೂ ಮೀಸಲಾತಿ ನೀತಿ ಅನ್ವಯಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭರವಸೆ ನೀಡಿದರು.

ವಿಧಾನ ಪರಿಷತ್ತಿನಲ್ಲಿ ಗುರುವಾರ ಬಿಜೆಪಿಯ ಛಲವಾದಿ ನಾರಾಯಣಸ್ವಾಮಿ ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ನಾಗರಿಕ ಸೇವಾ ನಿಯಮಗಳ ಅನ್ವಯ ಗುತ್ತಿಗೆ ಆಧಾರದಲ್ಲಿ ನೇಮಕ ಮಾಡಿಕೊಳ್ಳಲಿದ್ದು, ನಿರ್ದಿಷ್ಟ ಅವಧಿಗೆ ಸೀಮಿತವಾಗಿರುತ್ತದೆ. ನೇಮಕಾತಿ ವೇಳೆ ಪ್ರಭಾವಿಗಳಿಗೆ ಮಣೆ ಹಾಕಲಾಗುತ್ತಿದೆ, ತಳ ಸಮುದಾಯ ಕಡೆಗಣಿಸಲಾಗುತ್ತಿದೆ ಎಂಬುದು ಸರ್ಕಾರದ ಗಮನಕ್ಕೆ ಬಂದಿಲ್ಲ ಎಂದರು.

ಬ್ರಾಹ್ಮಣ, ಆರ್ಯವೈಶ್ಯ ನಿಗಮಗಳಿಗೆ ₹ 10 ಕೋಟಿ: ಇತರೆ ನಿಗಮಗಳಿಗೆ ಅನುದಾನ ನೀಡಲಾಗಿದೆ. ಆದರೆ, ಬ್ರಾಹ್ಮಣ, ಆರ್ಯವೈಶ್ಯ ಅಭಿವೃದ್ಧಿ ನಿಗಮಗಳನ್ನು ಕಡೆಗಣಿಸಲಾಗಿದೆ ಎಂದು ಜೆಡಿಎಸ್‌ನ ಟಿ.ಎ.ಶರವಣ ಅವರು ಅಸಮಾಧಾನ ವ್ಯಕ್ತಪಡಿಸಿದರು.

ಅವರ ಮಾತಿಗೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ, ಒಂದಷ್ಟು ಹಣ ನಿಗಮದಲ್ಲಿ ಖರ್ಚಾಗದೇ ಉಳಿದಿದೆ. ಹಾಗಾಗಿ, ಹೆಚ್ಚುವರಿ ಹಣ ಬಿಡುಗಡೆ ಮಾಡಿಲ್ಲ. ಎರಡೂ ನಿಗಮಗಳಿಗೆ ತಲಾ ₹ 10 ಕೋಟಿ ನೀಡಲಾಗುವುದು ಎಂದು ಭರವಸೆ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT