ಗುರುವಾರ , ಮೇ 26, 2022
28 °C

ರಾಜೀನಾಮೆ ನೀಡಿ ರಾಜ್ಯದ ಮಾನ ಉಳಿಸಿ: ಬಿಎಸ್‌ವೈಗೆ ಸುರ್ಜೇವಾಲಾ ಒತ್ತಾಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ‘ಪ್ರತಿದಿನ ನಿಮ್ಮ ಸರ್ಕಾರದ ವಿರುದ್ದ ಹಲವು ಆರೋಪಗಳು ಕೇಳಿಬರುತ್ತಲೇ ಇವೆ. ನಿಮಗೆ ರಾಜ್ಯದ ಹಿತಾಸಕ್ತಿಯ ಕುರಿತು ಕಾಳಜಿ ಇದ್ದರೆ, ದಯಮಾಡಿ ರಾಜೀನಾಮೆ ನೀಡಿ, ರಾಜ್ಯದ ಮಾನ ಉಳಿಸಿ’ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ್‌ ಸಿಂಗ್‌ ಸುರ್ಜೇವಾಲಾ ಒತ್ತಾಯಿಸಿದ್ದಾರೆ.

ಟ್ವೀಟ್‌ ಮಾಡಿರುವ ಅವರು, ‘ಇದೀಗ ನಿಮ್ಮದೇ ಪಕ್ಷದ ಶಾಸಕ (ಬಸನಗೌಡ ಪಾಟೀಲ ಯತ್ನಾಳ್‌) ಐಎಎಸ್‌ ಅಧಿಕಾರಿಗಳ ವರ್ಗಾವಣೆಯಲ್ಲಿ ನೂರಾರು ಕೋಟಿಯ ಹೋಲ್ ಸೇಲ್ ಭ್ರಷ್ಟಾಚಾರ ನಡೆದಿದೆ ಎಂದು ಆರೋಪಿಸಿದ್ದಾರೆ. ಹೀಗಿದ್ದೂ ನೀವು ಆ ಹುದ್ದೆಯಲ್ಲಿ ಮುಂದುವರಿಯುವುದು ಸರಿಯಲ್ಲ’ ಎಂದೂ ಅವರು ಹೇಳಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು