ಭಾನುವಾರ, ಸೆಪ್ಟೆಂಬರ್ 26, 2021
28 °C
ಖಾತೆ ಹಂಚಿಕೆ ಕುರಿತು ಬಸವರಾಜ ಬೊಮ್ಮಾಯಿ ಹೇಳಿಕೆ

ಅಸಮಾಧಾನ ಬಗೆಹರಿಸುವೆ: ಬಸವರಾಜ ಬೊಮ್ಮಾಯಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮೈಸೂರು: ‘ಸಂಪುಟ ವಿಸ್ತರಣೆ ಕುರಿತು ಪಕ್ಷದಲ್ಲಿ ಯಾವುದೇ ಅಸಮಾಧಾನ ಇಲ್ಲ. ಇರುವ ಸಣ್ಣಪುಟ್ಟ ಅಸಮಾಧಾನಗಳನ್ನು ಬಗೆಹರಿಸಲಾಗುವುದು’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಮುಖ್ಯಮಂತ್ರಿಯಾದ ಬಳಿಕ ಮೊದಲ ಬಾರಿಗೆ ಸೋಮವಾರ ಜಿಲ್ಲೆಗೆ ಭೇಟಿ ನೀಡಿದ್ದ ಅವರು ಸುದ್ದಿಗಾರರ ಜೊತೆಗೆ ಮಾತನಾಡುತ್ತಿದ್ದರು.

‘ಅಸಮಾಧಾನ ವ್ಯಕ್ತಪಡಿಸಿದ್ದ ಆನಂದ್ ಸಿಂಗ್ ಅವರೊಂದಿಗೆ ಒಮ್ಮೆ ಮಾತುಕತೆ ನಡೆಸಿದ್ದು, ಮತ್ತೆ ಮಾತನಾಡುವೆ. ಶಾಸಕ ರಾಮದಾಸ್ ಆತ್ಮೀಯ ಸ್ನೇಹಿತರಾಗಿದ್ದು, ಅವರೊಂದಿಗೂ ಮಾತನಾಡುವೆ’ ಎಂದು ತಿಳಿಸಿದರು.

‘ಬಿ.ಎಸ್.ಯಡಿಯೂರಪ್ಪ ತಮಗೆ ಸಂಪುಟ ದರ್ಜೆ ಸ್ಥಾನಮಾನ ಬೇಡ ಎಂದಿರುವುದರಿಂದ ನಿಕಟಪೂರ್ವ ಮುಖ್ಯಮಂತ್ರಿಯ ಸೌಲಭ್ಯವನ್ನಷ್ಟೇ ನೀಡಲಾಗುವುದು’ ಎಂದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು