ಬೆಂಗಳೂರು: ನಿವೃತ್ತ ಡಿಜಿಪಿ ಆರ್.ಪಿ.ಶರ್ಮಾ (60) ಅವರು ಅನಾರೋಗ್ಯ ಸಮಸ್ಯೆಯಿಂದ ನಗರದ ಆಸ್ಪತ್ರೆಯಲ್ಲಿ ಬುಧವಾರ ಸಂಜೆ ನಿಧನರಾದರು.

ಪೊಲೀಸ್ ಗೃಹ ಮಂಡಳಿಯ ಡಿಜಿಪಿಯಾಗಿ ಕಾರ್ಯನಿರ್ವಹಿಸಿದ್ದ ಶರ್ಮಾ ಅವರು ಕಳೆದ ಡಿಸೆಂಬರ್‌ನಲ್ಲಿ ನಿವೃತ್ತಿಯಾಗಿದ್ದರು. ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದ ಇವರು ದೊಡ್ಡಗುಬ್ಬಿಯ ಹೆಣ್ಣೂರು ವೃತ್ತದ ಬಳಿ ವಾಸವಿದ್ದರು.

ಇವರಿಗೆ ಪತ್ನಿ, ಇಬ್ಬರು ಮಕ್ಕಳು ಇದ್ದಾರೆ. ಹೆಬ್ಬಾಳದಲ್ಲಿ ಗುರುವಾರ ಮಧ್ಯಾಹ್ನ 12 ಗಂಟೆಗೆ ಅಂತ್ಯಕ್ರಿಯೆ ನೆರವೇರಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

ಕಳೆದ ಸೆಪ್ಟೆಂಬರ್‌ನಲ್ಲಿ ತಮ್ಮ ನಿವಾಸದಲ್ಲಿ ರಿವಾಲ್ವರ್ ಸ್ವಚ್ಛಗೊಳಿಸುತ್ತಿದ್ದಾಗ ಆಕಸ್ಮಿಕವಾಗಿ ಗುಂಡು ತಗುಲಿ ಶರ್ಮಾ ಗಾಯಗೊಂಡಿದ್ದರು. ಇವರು 1987ನೇ ಬ್ಯಾಚ್‌ನ ಅಧಿಕಾರಿ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.