ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಿವೃತ್ತ ಸಾರಿಗೆ ಅಧಿಕಾರಿಗೆ ಜೈಲು ಶಿಕ್ಷೆ

Last Updated 30 ಜುಲೈ 2022, 22:46 IST
ಅಕ್ಷರ ಗಾತ್ರ

ಬೆಂಗಳೂರು: ಹಣ ಅಕ್ರಮ ವರ್ಗಾವಣೆ ಆರೋಪದಡಿ ನಿವೃತ್ತ ಸಹಾಯಕ ಪ್ರಾದೇಶಿಕ ಸಾರಿಗೆ ಅಧಿಕಾರಿ ಜೆ.ವಿ.ರಾಮಯ್ಯ ಮತ್ತು ಅವರ ಪತ್ನಿ ಎಂ.ಲಲಿತಾ ಅವರಿಗೆ ಇಲ್ಲಿನ ವಿಶೇಷ ನ್ಯಾಯಾಲಯ ಮೂರು ವರ್ಷಗಳ ಕಠಿಣ ಜೈಲು ಶಿಕ್ಷೆ ಮತ್ತು ₹ 10 ಸಾವಿರ ದಂಡ ವಿಧಿಸಿ ಆದೇಶಿಸಿದೆ.

ಭ್ರಷ್ಟಾಚಾರ ನಿಗ್ರಹ ಕಾಯ್ದೆ ಅಡಿ ಕೋಲಾರ ಲೋಕಾಯುಕ್ತ ಪೊಲೀಸರು 2009ರಲ್ಲಿ ದಾಖಲಿಸಿದ್ದ ದೂರಿನ ಆಧಾರದಲ್ಲಿ ಜಾರಿ ನಿರ್ದೇಶನಾಲಯ ತನಿಖೆ ನಡೆಸಿತ್ತು.

ಪ್ರಕರಣದ ವಿಚಾರಣೆ ನಡೆಸಿದ ನಗರದ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಎಚ್‌.ಎ.ಮೋಹನ್ ಶುಕ್ರವಾರ (ಜು.29) ಈ ಕುರಿತಂತೆ ಆದೇಶಿಸಿದ್ದಾರೆ.

‘ರಾಮಯ್ಯ ಅವರು ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಸಹಾಯಕ ಪ್ರಾದೇಶಿಕ ಸಾರಿಗೆ ಅಧಿಕಾರಿಯಾಗಿ ಕಾರ್ಯ ನಿರ್ವಹಿಸುತ್ತಿದ್ದ ಸಮಯದಲ್ಲಿ ತಮ್ಮ ನಿಗದಿತ ಆದಾಯಕ್ಕಿಂತಲೂ ಶೇ 415.3 ರಷ್ಟು ಹೆಚ್ಚಿನ ಪ್ರಮಾಣದ ಅಂದರೆ, ₹ 1.24 ಕೋಟಿ ಮೊತ್ತದ ಹೆಚ್ಚಿನ ಆಸ್ತಿಯನ್ನು ಹೊಂದಿದ್ದಾರೆ’ ಎಂಬ ಕಾರಣಕ್ಕೆ ಈ ದೂರು ದಾಖಲಾಗಿತ್ತು.

ತನಿಖೆ ವೇಳೆ ಜಾರಿ ನಿರ್ದೇಶನಾಲಯ ₹ 70 ಲಕ್ಷಕ್ಕೂ ಹೆಚ್ಚಿನ ಮೊತ್ತದ ಸ್ವತ್ತನ್ನು ಪತ್ತೆಹಚ್ಚಿ 2018ರಲ್ಲಿ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT