ಶುಕ್ರವಾರ, 9 ಜೂನ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಿವೃತ್ತಿ ಉಪದಾನ 2006 ಏಪ್ರಿಲ್‌ 1 ರಿಂದಲೇ ಜಾರಿ

Last Updated 19 ಅಕ್ಟೋಬರ್ 2022, 20:51 IST
ಅಕ್ಷರ ಗಾತ್ರ

ಬೆಂಗಳೂರು: ರಾಷ್ಟ್ರೀಯ ಪಿಂಚಣಿ ಯೋಜನೆಗೆ ಒಳಪಡುವ ಸರ್ಕಾರಿ ನೌಕರರಿಗೆ ಮರಣ ಮತ್ತು ನಿವೃತ್ತಿ ಉಪದಾನ (ಡಿಸಿಆರ್‌ಜಿ) ಸೌಲಭ್ಯವನ್ನು 2006 ಏಪ್ರಿಲ್‌ 1ರಿಂದಲೇ ಅನ್ವಯವಾಗುವಂತೆ ಜಾರಿಗೊಳಿಸಿ ರಾಜ್ಯ ಸರ್ಕಾರ ಬುಧವಾರ ಆದೇಶವನ್ನು ಹೊರಡಿಸಿದೆ.

2018ರ ಜೂನ್‌ 23ರಂದು ಹೊರಡಿದ್ದ ಆದೇಶದಲ್ಲಿ 2018ರ ಏಪ್ರಿಲ್‌ 1ರಿಂದ ಜಾರಿಗೊಳಿಸಿ ಆದೇಶ ಹೊರಡಿಸಲಾಗಿತ್ತು. ಆ ಆದೇಶವನ್ನು ಪರಿಷ್ಕರಿಸಲಾಗಿದೆ. ಇದೀಗ ‌2006ರಿಂದಲೇ ವಿಸ್ತರಿಸಿರುವ ಸೌಲಭ್ಯವನ್ನು ಇತ್ಯರ್ಥಪಡಿಸಲು ಪ್ರತ್ಯೇಕ ಮಾರ್ಗಸೂಚಿಯನ್ನೂ ಹೊರಡಿಸಲಾಗಿದೆ.

‘ರಾಜ್ಯ ಸರ್ಕಾರಿ ಎನ್‌ಪಿಎಸ್‌ ನೌಕರರ ಸಂಘದ ನಿರಂತರ ಹೋರಾಟದ ಫಲವಾಗಿ ಸರ್ಕಾರ ಈ ಆದೇಶ ಹೊರಡಿಸಿದೆ. ಆದರೆ, ಹಳೆ ಪಿಂಚಣಿ ಯೋಜನೆಯನ್ನು ಜಾರಿಗೊಳಿಸುವರೆಗೆ ನಮ್ಮ ಹೋರಾಟ ಮುಂದುವರಿಯಲಿದೆ.

ಡಿಸೆಂಬರ್‌ 19ರಿಂದ ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನದಲ್ಲಿ ಮಾಡು ಇಲ್ಲವೆ ಮಡಿ ಅನಿರ್ದಿಷ್ಟವಾಧಿ ಹೋರಾಟ ಹಮ್ಮಿಕೊಳ್ಳಲಾಗಿದೆ’ ಎಂದು ಸಂಘದ ಅಧ್ಯಕ್ಷ ಶಾಂತರಾಮ ಅವರು ತಿಳಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT