ಶನಿವಾರ, ಸೆಪ್ಟೆಂಬರ್ 25, 2021
23 °C

ಸಾಮಾಜಿಕ ಪಿಂಚಣಿ ಹೆಚ್ಚಳಕ್ಕೆ ಕಂದಾಯ ಇಲಾಖೆ ಆದೇಶ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಮ್ಮ ಮೊದಲ ಸಂಪುಟ ಸಭೆಯಲ್ಲಿ ಕೈಗೊಂಡಿದ್ದ ನಿರ್ಧಾರದಂತೆ ಸಂಧ್ಯಾ ಸುರಕ್ಷಾ ಪಿಂಚಣಿ, ಅಂಗವಿಕಲರು ಮತ್ತು ವಿಧವೆಯರ ಮಾಸಾಶನಗಳನ್ನು ಹೆಚ್ಚಿಸಿ ಕಂದಾಯ ಇಲಾಖೆ ಶನಿವಾರ ಆದೇಶ ಹೊರಡಿಸಿದೆ.

ಜುಲೈ 28ರಂದು ಪ್ರಮಾಣವಚನ ಸ್ವೀಕರಿಸಿದ ಬಳಿಕ ಸಂಪುಟ ಸಭೆ ನಡೆಸಿದ್ದ ಬೊಮ್ಮಾಯಿ, ಸಂಧ್ಯಾ ಸುರಕ್ಷಾ ಪಿಂಚಣಿಯನ್ನು ₹ 1,000ದಿಂದ ₹ 1,200ಕ್ಕೆ, ಅಂಗವಿಕಲರು ಮತ್ತು ವಿಧವೆಯರ ಮಾಸಾಶನವನ್ನು ₹ 600ರಿಂದ ₹ 800ಕ್ಕೆ ಹೆಚ್ಚಿಸುವ ನಿರ್ಧಾರ ಕೈಗೊಂಡಿದ್ದರು. ಮಾಸಾಶನ ಪರಿಷ್ಕರಿಸಿರುವ ಕಂದಾಯ ಇಲಾಖೆ ಆದೇಶ ಹೊರಡಿಸಿದೆ. ಆಗಸ್ಟ್‌ ತಿಂಗಳಿನಿಂದಲೇ ಪರಿಷ್ಕೃತ ಮಾಸಾಶನ ಫಲಾನುಭವಿಗಳಿಗೆ ಸಿಗಲಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು