ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಠ್ಯಪುಸ್ತಕ ಪರಿಷ್ಕರಣೆಗೆ ಆಕ್ಷೇಪ: ಮುಕ್ತ ಮನಸ್ಸಿನಿಂದ ಬದಲಾವಣೆ- ಸಿಎಂ ಬೊಮ್ಮಾಯಿ

Last Updated 19 ಜೂನ್ 2022, 10:45 IST
ಅಕ್ಷರ ಗಾತ್ರ

ಬೆಂಗಳೂರು: ‘ಪರಿಷ್ಕೃತ ಪಠ್ಯಕ್ಕೆ ಆಕ್ಷೇಪಗಳಿದ್ದರೆ ಅದನ್ನು ನಿವಾರಿಸಲು ಸರ್ಕಾರ ಸಿದ್ಧವಿದೆ’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಲ್ಲಿ ಭಾನುವಾರ ಹೇಳಿದರು.

‘ಸರ್ಕಾರವು ಪ್ರತಿಷ್ಠೆಗೆ ಬಿದ್ದಿಲ್ಲ. ಪಠ್ಯದಲ್ಲಿ ಏನೆಲ್ಲಾ ಬದಲಾವಣೆ ಮಾಡಬೇಕೋ ಅದನ್ನು ಮುಕ್ತ ಮನಸ್ಸಿನಿಂದ ಮಾಡಲಾಗುವುದು’ ಎಂದು ನಗರದಲ್ಲಿ ಸುದ್ದಿಗಾರರಿಗೆ ತಿಳಿಸಿದರು.

‘ದೇಶ ಹಾಗೂ ರಾಜ್ಯ ಕಟ್ಟಲು ಶ್ರಮಿಸಿರುವ ಹಿರಿಯರು, ರಾಜಮಹಾರಾಜರು, ಸಾಹಿತಿಗಳು, ಕಲಾಕಾರರು, ಜ್ಞಾನಪೀಠ ಪುರಸ್ಕೃತ ಬಗ್ಗೆ ಅಪಾರ ಗೌರವ ಇದೆ. ಜೆಡಿಎಸ್‌ ವರಿಷ್ಠ ಎಚ್‌.ಡಿ.ದೇವೇಗೌಡ ಹಾಗೂ ಸ್ವಾಮೀಜಿಗಳು ಸಲ್ಲಿಸಿರುವ ಮನವಿ ಪರಿಶೀಲಿಸಿ ಬದಲಾವಣೆಗಳನ್ನು ಮುಕ್ತ ಮನಸ್ಸಿನಿಂದ ಮಾಡುತ್ತೇವೆ’ ಎಂದರು.

‘ನಾಡಿನ ಮಹನೀಯರಿಗೆ ಗೌರವ ಉಳಿಸಲು ಹಾಗೂ ಮುಂದಿನ ಜನಾಂಗಕ್ಕೆ ಮಹನೀಯರ ಇತಿಹಾಸ ತಿಳಿಸಲು ಯಾವುದೇ ಮಟ್ಟಕ್ಕೂ ಹೋಗಲು ತಯಾರಿದ್ದೇವೆ’ ಎಂದು ಬಸವರಾಜ ಬೊಮ್ಮಾಯಿ ಹೇಳಿದರು.

ಪ್ರಧಾನಿ ನರೇಂದ್ರ ಮೋದಿ ಅವರು ಎರಡು ದಿನ ರಾಜ್ಯ ಪ್ರವಾಸ ನಡೆಸಲಿದ್ದು ಎಲ್ಲ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT