ಬುಧವಾರ, 8 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

11 ಇಲಾಖೆಗಳ ನಿರ್ದಿಷ್ಟ ಹುದ್ದೆಗಳ ವೇತನ ಶ್ರೇಣಿ ಪರಿಷ್ಕರಿಸಿ ರಾಜ್ಯ ಸರ್ಕಾರ ಆದೇಶ

Last Updated 4 ಆಗಸ್ಟ್ 2022, 1:44 IST
ಅಕ್ಷರ ಗಾತ್ರ

ಬೆಂಗಳೂರು: ಆರನೇ ರಾಜ್ಯ ವೇತನ ಆಯೋಗ ಸಲ್ಲಿಸಿದ ವರದಿಯಂತೆ ಅರಣ್ಯ ಇಲಾಖೆಯ ಅರಣ್ಯ ರಕ್ಷಕರು, ಉಪವಲಯ ಅರಣ್ಯಾಧಿಕಾರಿ, ಆನೆ ಕಾವಾಡಿಗರು, ಮಾವುತ ಹುದ್ದೆಗಳು ಸೇರಿದಂತೆ, ಒಟ್ಟು 11 ವಿವಿಧ ಇಲಾಖೆಗಳ ನಿರ್ದಿಷ್ಟ ವೃಂದದ ಹುದ್ದೆಗಳ ವೇತನ ಶ್ರೇಣಿಯನ್ನು ಪರಿಷ್ಕರಿಸಿ ರಾಜ್ಯ ಸರ್ಕಾರ ಬುಧವಾರ ಆದೇಶ ಹೊರಡಿಸಿದೆ. ಪರಿಷ್ಕೃತ ವೇತನ ಶ್ರೇಣಿ ಆಗಸ್ಟ್‌ ತಿಂಗಳಿನಿಂದಲೇ ಜಾರಿಗೆ ಬರಲಿದೆ.

ಪ್ರಾಚ್ಯವಸ್ತು ಮತ್ತು ಸಂಗ್ರಹಾಲಯ ಇಲಾಖೆಯ ಸಹಾಯಕ ಕ್ಯುರೇಟರ್‌ ಮತ್ತು ಸರ್ವೇಯರ್ಸ್‌, ಆರ್ಕಿಯಾಲಜಿಕ್‌ ಅಸಿಸ್ಟೆಂಟ್‌ ಶಾಸನ ತಜ್ಞರು, ಕ್ಯುರೇಟರ್ಸ್‌, ಸಹಾಯಕ ನಿರ್ದೇಶಕರು (ಪ್ರಾಚ್ಯವಸ್ತು), ಹಿಂದುಳಿದ ವರ್ಗಗಳ ಕಲ್ಯಾಣ, ಸಮಾಜ ಕಲ್ಯಾಣ ಮತ್ತು ಬುಡಕಟ್ಟು ಕಲ್ಯಾಣ ಇಲಾಖೆಗಳ ಆಶ್ರಮ ಶಾಲಾ ಶಿಕ್ಷಕರು, ಅಬಕಾರಿ ಇಲಾಖೆಯ ಅಬಕಾರಿ ಉಪ ಅಧೀಕ್ಷಕರು, ಪೊಲೀಸ್‌ ವಿಧಿ ವಿಜ್ಞಾನ ಪ್ರಯೋಗಾಲಯ ಇಲಾಖೆಯ ಜಮೇದಾರ್‌, ಪ್ರಯೋಗಾಲಯ ಸಹಾಯಕರು, ಕಾರ್ಮಿಕ ಇಲಾಖೆಯ ಕಾರ್ಮಿಕ ಅಧಿಕಾರಿ, ಕಾನೂನು ಮಾಪನಶಾಸ್ತ್ರ ಇಲಾಖೆಯ ಸಹಾಯಕ ನಿಯಂತ್ರಕರು, ಮುದ್ರಣ, ಲೇಖನ, ಸಾಮಗ್ರಿ ಮತ್ತು ಪ್ರಕಟಣೆಗಳು ಇಲಾಖೆಯ ಸಹಾಯಕ ನಿರ್ದೇಶಕರು, ಭೂಮಾಪನ ಮತ್ತು ಭೂದಾಖಲೆಗಳು ಇಲಾಖೆಯ ಸಹಾಯಕ ನಿರ್ದೇಶಕರು (ಭೂದಾಖಲೆಗಳು) ಹುದ್ದೆಯ ವೇತನ ಶ್ರೇಣಿಯನ್ನುಪರಿಷ್ಕರಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT