ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಡಿಕೆಶಿ ಭೇಟಿಯಾದ ಜೆಡಿಎಸ್‌ ಮುಖಂಡ ರೇವೂ ನಾಯ್ಕ್‌ ಬೆಳಮಗಿ

Last Updated 13 ಆಗಸ್ಟ್ 2021, 18:14 IST
ಅಕ್ಷರ ಗಾತ್ರ

ಬೆಂಗಳೂರು: ಜೆಡಿಎಸ್‌ ಮುಖಂಡ ರೇವೂ ನಾಯ್ಕ್‌ ಬೆಳಮಗಿ ಕಾಂಗ್ರೆಸ್‌ ಸೇರಲು ಮುಂದಾಗಿದ್ದು, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಅವರನ್ನು ಶುಕ್ರವಾರ ಭೇಟಿಮಾಡಿ ಚರ್ಚೆ ನಡೆಸಿದ್ದಾರೆ.

ಬಿಜೆಪಿಯಲ್ಲಿ ಸಕ್ರಿಯರಾಗಿದ್ದ ಬೆಳಮಗಿ ಅವರು ಶಾಸಕರಾಗಿ, ಸಚಿವರಾಗಿ ಕಾರ್ಯನಿರ್ವಹಿಸಿದ್ದರು. ಕಳೆದ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಕಲಬುರ್ಗಿ ಗ್ರಾಮೀಣ ವಿಧಾನಸಭಾ ಕ್ಷೇತ್ರದಲ್ಲಿ ಅವರಿಗೆ ಬಿಜೆಪಿ ಟಿಕೆಟ್‌ ನಿರಾಕರಿಸಿತ್ತು. ಬಳಿಕ ಜೆಡಿಎಸ್‌ ಸೇರಿದ್ದ ಅವರು, ಆ ಪಕ್ಷದ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು. ಚುನಾವಣೆಯಲ್ಲಿ ಸೋತರೂ, ಜೆಡಿಎಸ್‌– ಕಾಂಗ್ರೆಸ್‌ ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿ ಸಕ್ರಿಯರಾಗಿದ್ದರು.

ಎಚ್‌.ಡಿ. ಕುಮಾರಸ್ವಾಮಿ ನೇತೃತ್ವದ ಸಮ್ಮಿಶ್ರ ಸರ್ಕಾರ ಪತನಗೊಂಡ ಬಳಿಕ ರೇವೂ ನಾಯ್ಕ್‌ ಅವರು ಜೆಡಿಎಸ್‌ನಲ್ಲೂ ಸಕ್ರಿಯರಾಗಿರಲಿಲ್ಲ. ಕಲಬುರ್ಗಿ ಗ್ರಾಮೀಣ ವಿಧಾನಸಭಾ ಕ್ಷೇತ್ರದಲ್ಲಿ ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್‌ ಟಿಕೆಟ್‌ ಪಡೆಯುವ ಮಹತ್ವಾಕಾಂಕ್ಷೆಯಿಂದ ಪಕ್ಷಾಂತರಕ್ಕೆ ಸಿದ್ಧತೆ ನಡೆಸಿದ್ದಾರೆ. ಅದಕ್ಕೆ ಪೂರಕವಾಗಿ ಡಿ.ಕೆ. ಶಿವಕುಮಾರ್‌ ಅವರನ್ನು ಭೇಟಿಮಾಡಿ ಚರ್ಚಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT