ಶುಕ್ರವಾರ, ಏಪ್ರಿಲ್ 23, 2021
23 °C
ಶಾಸಕ ರೇಣುಕಾಚಾರ್ಯರ ಮನೆಗೆ ಕಾಳಿಮಠದ ಋಷಿಕುಮಾರ ಸ್ವಾಮೀಜಿ ಭೇಟಿ

ಮತಾಂತರ ನಿಯಂತ್ರಿಸಲು ಆಗ್ರಹ: ಋಷಿಕುಮಾರ ಸ್ವಾಮೀಜಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಹೊನ್ನಾಳಿ: ‘ರಾಜ್ಯದಲ್ಲಿ ಮತಾಂತರ ಎಗ್ಗಿಲ್ಲದೇ ನಡೆಯುತ್ತಿದೆ. ಇದು ಬಿಜೆಪಿ ಶಾಸಕರ ತಾಯಿಯನ್ನೂ ಬಿಟ್ಟಿಲ್ಲ. ಮತಾಂತರ ತಡೆಗೆ ಕಠಿಣ ಕ್ರಮ ಕೈಗೊಳ್ಳುವಂತೆ ಕೇಂದ್ರ ಹಾಗೂ ರಾಜ್ಯ ಸರ್ಕಾರವನ್ನು ಆಗ್ರಹಿಸಲಾಗುವುದು’ ಎಂದು ಕಾಳಿಮಠದ ಋಷಿಕುಮಾರ ಸ್ವಾಮೀಜಿ ಹೇಳಿದರು.

ಪಟ್ಟಣದಲ್ಲಿರುವ ಶಾಸಕ ಎಂ.ಪಿ. ರೇಣುಕಾಚಾರ್ಯ ಅವರ ನಿವಾಸಕ್ಕೆ ಭಾನುವಾರ ಭೇಟಿ ನೀಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು.

‘ಅಲ್ಪಸಂಖ್ಯಾತರಿಗೆ ಹಾಗೂ ಕ್ರೈಸ್ತ ಮಿಷನರಿಗಳಿಗೆ ನೀಡುತ್ತಿರುವ ಅನುದಾನವನ್ನು ತಕ್ಷಣ ನಿಲ್ಲಿಸಬೇಕು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಒತ್ತಾಯಿಸಲಾಗುವುದು’ ಎಂದರು.

‘ದೇಶದಲ್ಲಿ ಎಲ್ಲರಿಗೂ ಒಂದೇ ಕಾನೂನು ಇರಬೇಕು. ಅಲ್ಪಸಂಖ್ಯಾತರು ಅದರಲ್ಲೂ ಮುಸ್ಲಿಮರು ಎರಡು ಮಕ್ಕಳನ್ನು ಮಾತ್ರ ಹೊಂದಬೇಕು. ಪ್ರತಿನಿತ್ಯ ಹುಟ್ಟುವ ಮಕ್ಕಳಲ್ಲಿ ಶೇ 80ರಷ್ಟು ಮಕ್ಕಳು ಮುಸ್ಲಿಮರ ಕುಟುಂಬಗಳಲ್ಲಿ ಹುಟ್ಟುತ್ತಿವೆ. ಇದು ಹೀಗೆಯೇ ಮುಂದುವರಿದರೆ ಒಂದಲ್ಲಾ ಒಂದು ದಿನ ಭಾರತ ಮುಸ್ಲಿಂ ರಾಷ್ಟ್ರ ಆಗುವುದರಲ್ಲಿ ಅನುಮಾನ ಇಲ್ಲ’ ಎಂದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು