ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಣ್ಣ ಅಪಘಾತ: ಜೈಲು ಶಿಕ್ಷೆ ರದ್ದುಗೊಳಿಸಿದ ಹೈಕೋರ್ಟ್‌

Last Updated 31 ಜನವರಿ 2022, 17:07 IST
ಅಕ್ಷರ ಗಾತ್ರ

ಬೆಂಗಳೂರು:ಸಣ್ಣ ಅಪಘಾತವೊಂದಕ್ಕೆ ಸಂಬಂಧಿಸಿದಂತೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ ಚಾಲಕನಿಗೆ ವಿಚಾರಣಾ ನ್ಯಾಯಾಲಯ ವಿಧಿಸಿದ್ದ 2 ತಿಂಗಳ ಜೈಲು ಶಿಕ್ಷೆಯನ್ನು ಹೈಕೋರ್ಟ್ ರದ್ದುಗೊಳಿಸಿದೆ.

ಈ ಸಂಬಂಧಶಿವಮೊಗ್ಗ ಜಿಲ್ಲೆಯ ಕೆಎಸ್‌ಆರ್‌ಟಿಸಿ ಚಾಲಕ ಎಚ್.ದೇವೇಂದ್ರಪ್ಪ ಸಲ್ಲಿಸಿದ್ದ ಕ್ರಿಮಿನಲ್ ಪುನರ್ ಪರಿಶೀಲನಾ ಅರ್ಜಿಯನ್ನು ನ್ಯಾಯಮೂರ್ತಿ ವಿ. ಶ್ರೀನಿವಾಸ್ ಹರೀಶ್ ಕುಮಾರ್‌ ಅವರಿದ್ದ ಏಕಸದಸ್ಯ ನ್ಯಾಯಪೀಠ 2ತಿಂಗಳ ಜೈಲು ಶಿಕ್ಷೆ ರದ್ದುಪಡಿಸಿ ₹ 1,500 ದಂಡ ಪಾವತಿಸಲು ಸೂಚಿಸಿದೆ.

’ಚಾಲಕನಿಗೆ ಶಿಕ್ಷೆ ವಿಧಿಸಿದ್ದ ವಿಚಾರವನ್ನು ಮುಂದಿಟ್ಟುಕೊಂಡು ಆತನ ವೃತ್ತಿಗೆ ಯಾವುದೇ ರೀತಿಯಲ್ಲೂ ತೊಂದರೆ ಕೊಡಬಾರದು. ಇದನ್ನು ಆತನ ಸೇವಾ ಪುಸ್ತಕದಲ್ಲಿ ಉಲ್ಲೇಖಿಸಬಾರದು‘ ಎಂದು ನ್ಯಾಯಪೀಠ ಸಾರಿಗೆ ಸಂಸ್ಥೆಗೆ ನಿರ್ದೇಶಿಸಿದೆ.

’ಇದೊಂದು ಸಣ್ಣ ಅಪಘಾತ. ಚಾರ್ಮಾಡಿ ಘಾಟ್ ರಸ್ತೆಯ ಕಡಿದಾದ ತಿರುವಿನಲ್ಲಿ ಚಾಲಕ ಸರಿಯಾಗಿ ಚಾಲನೆ ಮಾಡುತ್ತಿದ್ದರೂ ಖಾಸಗಿ ಬಸ್‌ಗೆ ಡಿಕ್ಕಿಯಾಗಿದೆ. ಇದರಲ್ಲಿ ಚಾಲಕನ ನಿರ್ಲಕ್ಷ್ಯ ಕಾಣುತ್ತಿಲ್ಲ‘ ಎಂದು ನ್ಯಾಯಪೀಠ ಅಭಿಪ್ರಾಯಪಟ್ಟಿದೆ.

2014ರ ಆಗಸ್ಟ್‌ನಲ್ಲಿ ಚಾರ್ಮಾಡಿ ಘಾಟ್‌ನ ಕಿರಿದಾದ ರಸ್ತೆಯ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಬಸ್ ಖಾಸಗಿ ಬಸ್ ಗೆ ಡಿಕ್ಕಿ ಹೊಡೆದು ಸಣ್ಣ ಅಪಘಾತ ಸಂಭವಿಸಿತ್ತು. ಈ ಸಂಬಂಧ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯ ಮ್ಯಾಜಿಸ್ಟ್ರೇಟ್ ಕೋರ್ಟ್ 2019ರಲ್ಲಿ ಪ್ರಕರಣದ ವಿಚಾರಣೆ ನಡೆಸಿ 2 ತಿಂಗಳು ಜೈಲು ಶಿಕ್ಷೆ ಮತ್ತು ₹1,500 ದಂಡ ವಿಧಿಸಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT