ಮಂಗಳವಾರ, ಜೂನ್ 28, 2022
28 °C

ಅಧಿಕಾರಿಗಳ ಕಿತ್ತಾಟ: ವರ್ಗಾವಣೆ ಬೆನ್ನಲ್ಲೇ ಸಿಎಂ ಭೇಟಿಯಾದ ರೋಹಿಣಿ ಸಿಂಧೂರಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಮೈಸೂರು ಜಿಲ್ಲಾಧಿಕಾರಿ ಹುದ್ದೆಯಿಂದ ಶನಿವಾರ ರಾತ್ರಿ ವರ್ಗಾವಣೆಗೊಂಡಿರುವ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಅವರು ಭಾನುವಾರ ಬೆಳಿಗ್ಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವನ್ನು ಭೇಟಿ‌ ಮಾಡಿ ಚರ್ಚೆ ನಡೆಸಿದರು. 

ಮುಖ್ಯಮಂತ್ರಿ ನಿವಾಸ 'ಕಾವೇರಿ'ಗೆ ಬಂದ ಸಿಂಧೂರಿ, ತಮ್ಮ  ವರ್ಗಾವಣೆಯನ್ನು ರದ್ದುಪಡಿಸುವಂತೆ‌ ಮನವಿ ಮಾಡಿದ್ದಾರೆ ಎಂದು ಗೊತ್ತಾಗಿದೆ. ಸುಮಾರು ಅರ್ಧ ಗಂಟೆ ಸಿಂಧೂರಿ ಅವರು ಮುಖ್ಯಮಂತ್ರಿಯ ನಿವಾಸದಲ್ಲಿದ್ದರು. 

'ಪಾಲಿಕೆ ಅಯುಕ್ತೆ ಶಿಲ್ಪನಾಗ್ ಜೊತೆಗಿನ ವಿವಾದದಲ್ಲಿ ತಮ್ಮದೇನೂ ತಪ್ಪಿಲ್ಲ' ಎಂದು ಮುಖ್ಯಮಂತ್ರಿಗೆ‌ ಮನವರಿಕೆ ಮಾಡಲು ಬಂದಿದ್ದರು. ಆದರೆ, ವರ್ಗಾವಣೆ ರದ್ದುಪಡಿಸಲು ಮುಖ್ಯಮಂತ್ರಿ ಸ್ಪಷ್ಟವಾಗಿ ನಿರಾಕರಿಸಿದ್ದಾರೆ ಎಂದೂ ಗೊತ್ತಾಗಿದೆ.

ಇದನ್ನೂ ಓದಿ: 

ರೋಹಿಣಿ ಸಿಂಧೂರಿ ಮತ್ತು ಮೈಸೂರು ಪಾಲಿಕೆ ಆಯುಕ್ತೆ ಶಿಲ್ಪಾ ನಾಗ್‌ ಅವರನ್ನು ರಾಜ್ಯ ಸರ್ಕಾರ ಶನಿವಾರ ರಾತ್ರಿ ಎತ್ತಂಗಡಿ ಮಾಡಿದೆ. ರೋಹಿಣಿ ಅವರನ್ನು ಧಾರ್ಮಿಕ ದತ್ತಿ ಇಲಾಖೆಯ ಆಯುಕ್ತರಾಗಿ ವರ್ಗಾವಣೆ ಮಾಡಲಾಗಿದೆ. ಈ ಹಿಂದೆ ಅವರು ಇದೇ ಹುದ್ದೆಯಲ್ಲಿದ್ದರು. ಶಿಲ್ಪಾ ನಾಗ್ ಆವರನ್ನು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್‌ ಇಲಾಖೆಯ ನಿರ್ದೇಶಕರಾಗಿ (ಇ– ಆಡಳಿತ) ವರ್ಗಾವಣೆ ಮಾಡಲಾಗಿದೆ. 

ವಾಣಿ ತೆರಿಗೆ ಇಲಾಖೆಯ (ಜಾರಿ) ಹೆಚ್ಚುವರಿ ಆಯುಕ್ತರಾಗಿದ್ದ ಡಾ. ಬಗಾದಿ ಗೌತಮ್‌ ಅವರನ್ನು ಮೈಸೂರು ಜಿಲ್ಲಾಧಿಕಾರಿಯಾಗಿ ನೇಮಿಸಲಾಗಿದೆ.  ಆಹಾರ ಮತ್ತು  ನಾಗರಿಕ  ಸರಬರಾಜು ನಿಗಮದ ಆಡಳಿತ ವ್ಯವಸ್ಥಾಪಕ ಲಕ್ಷ್ಮೀಕಾಂತ ರೆಡ್ಡಿ ಅವರನ್ನು ಮೈಸೂರು ಪಾಲಿಕೆ ಆಯುಕ್ತರಾಗಿ ನೇಮಿಸಲಾಗಿದೆ.

ಇದನ್ನೂ ಓದಿ: 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು