ಗುರುವಾರ , ಆಗಸ್ಟ್ 18, 2022
24 °C

ಬಾಡಿಗೆ ಟ್ರೋಲರ್‌ ಬಳಸಿಲ್ಲ: ರೋಹಿಣಿ ಸಿಂಧೂರಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ‘ನಾನು ಯಾವತ್ತೂ ಬಾಡಿಗೆ ಟ್ರೋಲರ್‌ಗಳನ್ನು ಬಳಸಿಕೊಂಡಿಲ್ಲ. ಈ ವಿಷಯದಲ್ಲಿ ಐಪಿಎಸ್‌ ಅಧಿಕಾರಿ ಡಿ. ರೂಪಾ ಮಾಡಿರುವ ಆರೋಪ ಸತ್ಯಕ್ಕೆ ದೂರವಾದುದು’ ಎಂದು ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ಹೇಳಿದ್ದಾರೆ.

‘ರೋಹಿಣಿ ಸಿಂಧೂರಿ ತಮ್ಮ ವಿರೋಧಿಗಳ ಬಾಯಿ ಮುಚ್ಚಿಸಲು ಬಾಡಿಗೆ ಟ್ರೋಲರ್‌ಗಳನ್ನು ಬಳಸಿಕೊಳ್ಳುತ್ತಿದ್ದಾರೆ’ ಎಂದು ಆರೋಪಿಸಿದ್ದ ಡಿ. ರೂಪಾ, ಈ ಸಂಬಂಧ ಸಾರ್ವಜನಿಕ ಸಂಪರ್ಕ ಕ್ಷೇತ್ರದ ಸಂಸ್ಥೆಯೊಂದರ ಮಾಜಿ ಉದ್ಯೋಗಿಯೊಬ್ಬರ ಜತೆ ವಾಟ್ಸ್‌ ಆ್ಯಪ್‌ನಲ್ಲಿ ನಡೆದ ಸಂಭಾಷಣೆಯನ್ನು ಫೇಸ್‌ಬುಕ್‌ ಖಾತೆಯಲ್ಲಿ ಬಹಿರಂಗಪಡಿಸಿದ್ದರು. ರೂಪಾ ಅವರ ಫೇಸ್‌ಬುಕ್‌ ಪೋಸ್ಟ್‌ ಕುರಿತು ‘ಪ್ರಜಾವಾಣಿ’ಯ ಬುಧವಾರದ ಸಂಚಿಕೆಯಲ್ಲಿ ಪ್ರಕಟವಾದ ವರದಿಗೆ ಸ್ಪಷ್ಟನೆ ನೀಡಿರುವ ರೋಹಿಣಿ, ‘ಬಾಡಿಗೆ ಟ್ರೋಲರ್‌ಗಳ ಆರೋಪ ಆಧಾರರಹಿತವಾದುದು. ದುರುದ್ದೇಶದಿಂದ ಈ ಆರೋಪ ಮಾಡಲಾಗಿದೆ’ ಎಂದು ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು